ಏಪ್ರಿಲ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ನ ‘ಸತ್ಯಮೇವ ಜಯತೇ’ ಸಮಾವೇಶವನ್ನು ಏಪ್ರಿಲ್ 9ಕ್ಕೆ ಮುಂದೂಡಲಾಗಿದೆ.
‘ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಏಪ್ರಿಲ್ 9ಕ್ಕೆ ನಿಗದಿಪಡಿಸಲಾಗಿದೆ. ಇನ್ನುಳಿದ ವಿಚಾರಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸತ್ಯ ಮೇವ ಜಯತೇ ಕಾರ್ಯಕ್ರಮದ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಲಾಗಿದ್ದು, ರಣದೀಪ್ ಸಿಂಗ್ ಸುರ್ಜೆವಾಲ, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಮೊದಲಾದವರು ಭಾಗವಹಿಸಿದ್ದರು.
2019ರ ಲೋಕಸಭೆ ಚುನಾವಣಾ ಪ್ರಚಾರ ವೇಳೆ ಕೋಲಾರದಲ್ಲಿ ನೀಡಿದ್ದ ಮೋದಿ ಸರ್‌ನೇಮ್ ಹೇಳಿಕೆಗೆ ರಾಹುಲ್ ಎರಡು ವರ್ಷ ಶಿಕ್ಷೆಗೆ ಗುರಿಯಾಗಿದ್ದು, ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಹೀಗಾಗಿ, ಕೋಲಾರದಿಂದಲೇ ಸಂವಿಧಾನ ರಕ್ಷಣೆ ಹೋರಾಟ ಆರಂಭಿಸಲು ಕಾಂಗ್ರೆಸ್ ತೀರ್ಮಾನಿಸಿದೆ