Wednesday, February 19, 2025
Homeಟಾಪ್ ನ್ಯೂಸ್ಕರ್ನಾಟಕ ಬಂದ್ ಹಿಂಪಡೆದ ಕಾಂಗ್ರೆಸ್

ಕರ್ನಾಟಕ ಬಂದ್ ಹಿಂಪಡೆದ ಕಾಂಗ್ರೆಸ್

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮುಗಿಬಿದ್ದಿರುವ ಕಾಂಗ್ರೆಸ್ ನೀಡಿದ್ದ ಕರ್ನಾಟಕ ಬಂದ್‌ ಹಿಂಪಡೆದಿದೆ. ಮಾರ್ಚ್‌ ೯ರಂದು ಬೆಳಿಗ್ಗೆ ೯ ಗಂಟೆಯಿಂದ ೧೧ ಗಂಟೆಯವರೆಗಿನ ೨ ತಾಸಿನ ಬಂದ್‌ ಕರೆಯನ್ನು ವಾಪಸ್‌ ಪಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಬಂದ್ ನಡೆಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು.

ಭಾನುವಾರ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೇ ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದರು. 

ಆದರೆ ಇಂದು ಕಾಂಗ್ರೆಸ್ ನಾಯಕರೆಲ್ಲರೂ ಬಂದ್ ವಿಚಾರವನ್ನು ಪುನರ್ ವಿಮರ್ಷೆ ಮಾಡಿ ಜನರ ಹಿತದೃಷ್ಠಿಯಿಂದ ಬಂದ್ ಹಿಂಪಡೆಯಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ರು

ಹೆಚ್ಚಿನ ಸುದ್ದಿ

error: Content is protected !!