Thursday, March 12, 2026
Homeಟಾಪ್ ನ್ಯೂಸ್SHOCKING: ಬೈಕ್‌ಗೆ ಡಿಕ್ಕಿ ಹೊಡೆದ ಬಸ್‌, ಗ್ರಾಮ ಲೆಕ್ಕಾಧಿಕಾರಿ ಸಾ*ವು..!

SHOCKING: ಬೈಕ್‌ಗೆ ಡಿಕ್ಕಿ ಹೊಡೆದ ಬಸ್‌, ಗ್ರಾಮ ಲೆಕ್ಕಾಧಿಕಾರಿ ಸಾ*ವು..!

ತುಮಕೂರು: ಇತ್ತೀಚಿನ ದಿನಗಳಲ್ಲಿ ಬಸ್‌ನಿಂದ (Bus) ಅಪಘಾತವಾಗುತ್ತಿರುವ (Road Mishap)) ಅನೇಕ ಪ್ರಕರಣಗಳು ವರದಿಯಾಗುತ್ತಿದೆ. ಎದುರುಗಡೆಯಿಂದ ಬಂದ ಬೈಕ್‌ಗೆ (Bike) ಕಿಲ್ಲರ್ ಕೆಎಸ್ಆರ್‌ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ (Tumkuru) ನಡೆದಿದೆ.

ಸ್ಥಳದಲ್ಲೇ ಸಾವನ್ನಪ್ಪಿದ ಗ್ರಾಮ ಲೆಕ್ಕಾಧಿಕಾರಿ
ಮಹೇಶ್‌ ತುಮಕೂರಿನಿಂದ 15 ದಿನಗಳ ಹಿಂದೆ ಹುಟ್ಟಿದ್ದ ಮಗಳ ಜನನ ಪ್ರಮಾಣ ಪತ್ರವನ್ನ ತೆಗೆದುಕೊಂಡು ತನ್ನೂರಿಗೆ ಹೋಗುವಾಗ ಈ ಘಟನೆ ನಡೆದಿದ್ದು, ಸಾರಿಗೆ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ 25 ವರ್ಷದ  ಗ್ರಾಮ ಲೆಕ್ಕಾಧಿಕಾರಿ ಮೃತಪಟ್ಟಿದ್ದಾರೆ. ಮಹೇಶ್,ತುಮಕೂರು ಜಿಲ್ಲೆ  ಗುಬ್ಬಿ ತಾಲ್ಲೂಕಿನ ಮೂಕನಹಳ್ಳಿ ಗ್ರಾಮದ ವಾಸಿಯಾಗಿದ್ದು, ತುಮಕೂರು ಹೊರವಲಯದ ಹೆಗ್ಗೆರೆ ಬಳಿಯ ಗೃಹ ಸಚಿವ ಪರಮೇಶ್ವರ ಮನೆ ಮುಂದೆ ಘಟನೆ ನಡೆದಿದೆ. ಇನ್ನು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲೂ ಬಸ್‌ -ಬೈಕ್‌ ಅಪಘಾತ
ಕಿಲ್ಲರ್ ಬಿಎಂಟಿಸಿ ಗೆ ಬೆಂಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರೇಷ್ಮೆ ಸಂಸ್ಥೆಯ ಮೆಟ್ರೋ ಸ್ಟೇಷನ್ ಬಳಿ ಘಟನೆ ನಡೆದಿದೆ. ಬದುಕುಳಿದ ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಆತನನ್ನು ಶಿಫ್ಟ್ ಮಾಡಲಾಗಿದೆ. ಕೆಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. KA 01 4168 ಸಂಖ್ಯೆಯ ಬಿಎಂಟಿಸಿ ಬಸ್ ನಿಂದ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್‌ ಗೆ ಬೈಕ್‌ ಸವಾರ ಬಲಿ, ಮತ್ತೋರ್ವನಿಗೆ ಗಂಭೀರ ಗಾಯ

ಬಿಎಂಟಿಸಿ ಬಸ್ ಡಿಕ್ಕಿಯಾಗ್ತಿದ್ದಂತೆ ಬೈಕ್ ಸವಾರನಿಗೆ ತೀವ್ರ ರಕ್ತಸ್ರಾವ ಆಗಿದೆ. ನೋಡನೋಡ್ತಿದ್ದಂತೆ ಪ್ರಾಣ ಪಕ್ಷಿ ಹಾರಿಹೋಗಿದೆ. ಘಟನೆ ನೋಡಿ ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ
ಸಿಲಿಕಾನ್ ಸಿಟಿ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಇಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಬಲಭಾಗದಲ್ಲಿ‌ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಇದೇ ವೇಳೆ ಅತಿ ವೇಗವಾಗಿ ಬಂದ ಬಿಎಂಟಿಸಿ ವೋಲ್ವೊ ಬಸ್ ಲಾರಿಗೆ ಗುದ್ದಿದೆ. ಈ ವೇಳೆ ಇಬ್ಬರ ದುರ್ಮರಣವಾಗಿದೆ.ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಬಸ್​ನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ. ಪ್ರಕರಣ ದಾಖಲಿಸಿಕೊಂಡಿರೋ ಯಲಹಂಕ ಸಂಚಾರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫ್ಲೈಓವರ್​​ ಮೇಲೆ ಅಪಘಾತವಾಗಿ ನಿಂತಿರುವ ಕಾರು, ಲಾರಿ ಮತ್ತು ಬಸ್​​ಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ.

ಇದನ್ನೂ ಓದಿ : ಮಗ, ಸೊಸೆ ಕಾಟದಿಂದ ನೊಂದು ದಯಾಮರಣಕ್ಕೆ ಅರ್ಜಿ ಹಾಕಿದ ತುಮಕೂರು ವೃದ್ಧ!

 

ಹೆಚ್ಚಿನ ಸುದ್ದಿ

Change Language »
error: Content is protected !!