ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಕೋಲಾರದ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ ಅವರ ಸಮಾವೇಶದಲ್ಲಿ ಮಾತನಾಡಿದ ಹೆಚ್‌ಡಿಕೆ, ನಾವು ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದೂ ಭರವಸೆ ನೀಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಕುಮಾರಸ್ವಾಮಿಗೆ ಒಕ್ಕಲಿಗ ಯುವಕ ಪತ್ರ ಬರೆದಿರುವುದನ್ನು ಇಲ್ಲಿ ನೆನಪಿಸಬಹುದು. ಒಕ್ಕಲಿಗ ರೈತ ಯುವಕರಿಗೆ ಮದುವೆಗೆ ವಧುಗಳ ಸಮಸ್ಯೆ ಇದೆ ಎಂದು ಧನಂಜಯ ಎಂಬ ಯುವಕನೊಬ್ಬ ಪತ್ರ ಬರೆದು ಗಮನ ಸೆಳೆದಿದ್ದ.
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿಗೆ ಯುವಕ ಮನವಿ ಮಾಡಿದ್ದ.