ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಪಕ್ಷದೊಳಗೆ ಉಂಟಾಗಿರುವ ಭಿನ್ನಮತಕ್ಕೆ ಪ್ರಹ್ಲಾದ್ ಜೋಷಿ ಎಂಟ್ರಿಯಾಗಿದ್ದಾರೆ. ಅಥಣಿಯಿಂದ ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಟಿಕೆಟ್ ಗಾಗಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಲಾಬಿ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲವಾಗಿದ್ದು, ಕುಮಠಳ್ಳಿ ಹಾಗೂ ಸವದಿ ಜೊತೆ ಮಾತನಾಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಟಿಕೆಟ್ ವಿಚಾರದಲ್ಲಿ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಅದಕ್ಕೆ ಬದ್ದ ಇರಬೇಕು. ಬಹಿರಂಗವಾಗಿ ಯಾರೂ ಮಾತನಾಡಬೇಡಿ ಅಂತಾ ಸೂಚಿಸಿದ್ದೇನೆ. ಒಂದೇರಡು ಸಣ್ಣ ಪುಟ್ಟ ತೊಂದರೆಗಳಿದ್ದವು, ಅದನ್ನು ಸರಿಪಡಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಜೋಷಿ ತಿಳಿಸಿದ್ದಾರೆ.
ಜಿಲ್ಲೆಯ 18 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಚಿಂತಿಸಿದ್ದೇವೆ. ಜಿಲ್ಲೆಯ ಪ್ರತಿಯೊಬ್ಬರ ನಾಯಕರ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದೇನೆ. ಏ.8 ಅಥವಾ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದವರು ಹೇಳಿದ್ದಾರೆ.