Saturday, January 25, 2025
Homeಟಾಪ್ ನ್ಯೂಸ್ಶಾಸಕ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

ಶಾಸಕ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹಾಸನ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಮತ್ತು ಕೃಷಿ ಕಾರ್ಯಗಳಿಗೆ ನೀರು ಪೂರೈಸುವ ಉದ್ದೇಶದಿಂದ ಪ್ರಾರಂಭಿಸಿರುವ ಎತ್ತಿನ ಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಲೋಕಾಯುಕ್ತದಲ್ಲಿ ದೂರು ಕೂಡಾ ದಾಖಲಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ವ್ಯಾಪಕವಾದ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆದಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ವಕ್ತಾರರಾದ ಎನ್‌.ಆರ್‌.ರಮೇಶ್‌ ಆರೋಪಪಿಸಿದ್ದಾರೆ.

ದೂರುದಾರ ಎನ್‌.ಆರ್‌ ರಮೇಶ್

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ತಮ್ಮ ಸ್ವಹಿತ ಸಾಧನೆಗಾಗಿ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿಗಳನ್ನು ನಿಯೋಜಿಸಿಕೊಂಡು, KTPP ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ 05 ಲಕ್ಷಕ್ಕೂ ಹೆಚ್ಚು ಮೊತ್ತದ ಕಾಮಗಾರಿಗಳನ್ನು ವಿಭಜಿಸಿ ತಮಗಿಷ್ಟ ಬಂದ ಹಾಗೆ ಬಳಸಿಕೊಂಡಿದ್ದಾರೆ.

PRED ಇಲಾಖೆಯ ಅರಸೀಕೆರೆ ವಿಭಾಗದ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವರಾಜು ಮತ್ತು ಕಿರಿಯ ಅಭಿಯಂತರ ಉಮೇಶ್ ಸೇರಿದಂತೆ ಇತರೆ ಭ್ರಷ್ಟ ಅಧಿಕಾರಿಗಳು ಶಾಸಕ ಶಿವಲಿಂಗೇಗೌಡರೊಂದಿಗೆ ಶಾಮೀಲಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನರಿಗೆ ದೊಡ್ಡ ಮಟ್ಟದ ವಂಚನೆ ಮಾಡಿರುವುದೂ ಅಲ್ಲದೇ – ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ನಕಲಿ ದಾಖಲೆಗಳನ್ನು ತಯಾರಿಸುವ ಮೂಲಕ ಸರ್ಕಾರದ ಅನುದಾನಗಳನ್ನು ವಂಚಿಸಿರುತ್ತಾರೆ ಎಂದು ಆರೋಪಿಸಿದ ರಮೇಶ್‌ ಲೋಕಾಯುಕ್ತಕ್ಕೆ ದೂರು ನೀಡಿದ್ರು

ಹೆಚ್ಚಿನ ಸುದ್ದಿ

error: Content is protected !!