ತುಮಕೂರು: ಲಂಚಪ್ರಕರಣದಲ್ಲಿ ಸಿಲುಕಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಮಾಡಾಳು ವಿರೂಪಾಕ್ಷಪ್ಪರನ್ನು ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಅರೆಸ್ಟ್ ಮಾಡಿ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಮಧ್ಯಾಹ್ನ ಹೈಕೋರ್ಟ್‍ನಲ್ಲಿ ಮಾಡಾಳು ವಿರೂಪಾಕ್ಷಪ್ಪನವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಗಿತ್ತು, ಆಗಿನಿಂದ ಅವರ ಹುಡುಕಾಟ ನಡೆದಿತ್ತು.
ಕೊನೆಯ ಘಳಿಗೆಯಲ್ಲೂ ಮಾಡಾಳ್ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುವ ಕೆಲಸ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಅವರ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಕಲೆ ಹಾಕುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಅವರ ಕಾರಿಗೆ ಅಡ್ಡಗಟ್ಟಿದರು. ಬಿಳಿ ಬಣ್ಣದ ಇನ್ನೋವಾ ಕಾರ್‍ನಲ್ಲಿ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಮಾಡಾಳ್‍ರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು.
ಕೆಎಸ್‍ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದಾರೆ.