Sunday, July 7, 2024
Homeಟಾಪ್ ನ್ಯೂಸ್Loksabha Speaker: ಲೋಕಸಭಾ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

Loksabha Speaker: ಲೋಕಸಭಾ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ನವದೆಹಲಿ: ಇಂದು ಲೋಕಸಭೆಯ ಸ್ಪೀಕರ್‌ ಚುನಾವಣೆ ನಡೆಯಲಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಮಂಗಳವಾರ ಲೋಕಸಭೆ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಇದುವರೆಗೂ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದ ಉದಾಹರಣೆ ಇಲ್ಲ. ಇದೇ ಮೊದಲ ಬಾರಿಗೆ ಈ ಚುನಾವಣೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಟಿಡಿಪಿ ತನ್ನ ಸಂಸದರಿಗೆ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿವೆ.

ಸ್ಪೀಕರ್ ಆಯ್ಕೆಯ ಬಗ್ಗೆ ಎನ್​ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವಿನ ಮಾತುಕತೆ ವಿಫಲವಾಗಿತ್ತು. ಹೀಗಾಗಿ, ಚುನಾವಣೆ ಮೂಲಕ ಸ್ಪೀಕರ್ ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಡೆಪ್ಯೂಟಿ ಸ್ಪೀಕರ್ ಅವರು ಇಂಡಿಯಾ ಬ್ಲಾಕ್‌ನ ಸದಸ್ಯರಾಗಿರಬೇಕು ಎಂಬ ಷರತ್ತಿನ ಅಡಿಯಲ್ಲಿ ಸರ್ಕಾರಿ ಬೆಂಬಲಿತ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲು ಪ್ರತಿಪಕ್ಷಗಳು ಒಪ್ಪಿಕೊಂಡಿತ್ತು. ಆದರೂ ಸ್ಪಷ್ಟವಾಗಿ, ಎರಡೂ ಕಡೆಯವರು ಒಪ್ಪಂದಕ್ಕೆ ಬರಲು ಸಾಧ್ಯವಾಗಲಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡದ ಹಿನ್ನೆಲೆ ಇಂದು ಈ ಚುನಾವಣೆ ನಡೆಯಲಿದೆ.

ಹೆಚ್ಚಿನ ಸುದ್ದಿ