ಬಿಜೆಪಿಯ ಚುನಾವಣಾ ಚಿಹ್ನೆ ಕಮಲ ಕೂಡಾ ಧಾರ್ಮಿಕ ಚಿಹ್ನೆ ಆಗಿರುವುದರಿಂದ, ಧಾರ್ಮಿಕ ಚಿಹ್ನೆ, ಹೆಸರುಗಳನ್ನು ಹೊಂದಿರುವ ಪಕ್ಷಗಳನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಬಿಜೆಪಿಯನ್ನೂ ಸಹ ಪ್ರತಿವಾದಿಯನ್ನಾಗಿ ಮಾಡಬೇಕೆಂದು ಮುಸ್ಲಿಂ ಲೀಗ್ ಸುಪ್ರೀಂ ಕೋರ್ಟಿನಲ್ಲಿ ವಾದಿಸಿದೆ.
ಕಮಲವು ಹಿಂದೂ ಧರ್ಮ ಮತ್ತು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಧಾರ್ಮಿಕ ಚಿಹ್ನೆಯಾಗಿದೆ ಎಂದು ಮುಸ್ಲಿಂ ಲೀಗ್ ಹೇಳಿದೆ.
2021 ರಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಸೈಯದ್ ವಜೀಮ್ ರಿಜ್ವಿ ಅವರು ʼಧಾರ್ಮಿಕ ಚಿಹ್ನೆಗಳು ಮತ್ತು ಹೆಸರುಗಳನ್ನು ಬಳಸುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧʼ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಲಿಸುತ್ತಿದೆ.
ಬಿಜೆಪಿ ಮಾತ್ರವಲ್ಲದೆ, ಶಿವಸೇನೆ, ಶಿರೋಮಣಿ ಅಕಾಲಿದಳ ಸೇರಿದಂತೆ 27 ಇತರ ರಾಜಕೀಯ ಪಕ್ಷಗಳನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಬಹುದು ಎಂದು ಲೀಗ್ ವಾದ ಮಾಡಿದೆ.