Tuesday, December 3, 2024
Homeಟಾಪ್ ನ್ಯೂಸ್ಆಸ್ಪತ್ರೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಹೈಡ್ರಾಮಾ

ಆಸ್ಪತ್ರೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಹೈಡ್ರಾಮಾ

ಅತ್ತ ಅರೆಸ್ಟ್ ಆಗಿ ಇನ್ನೂ ಕೆಲ ಹೊತ್ತು ಕಳೆದಿಲ್ಲ ., ಇತ್ತ ಆಗಲೇ ಮಾಡಾಳು ವಿರೂಪಾಕ್ಷಪ್ಪ ಎದೆ ನೋವು ಎನ್ನಲು ಆರಂಭಿಸಿದ್ದಾರೆ.

ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ವಿರೂಪಕ್ಷಪ್ಪರನ್ನು ಬಂಧಿಸಿದ್ದರು. ಬಂಧನದ ನಂತರ ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವಿರೂಪಾಕ್ಷಪ್ಪ ತಾನು ಹಾರ್ಟ್ ಪೇಷಂಟ್.. ತನಗೆ ಎದೆ ನೋವು ಕಾಣಿಸಿಕೊಳ್ಳುತ್ತಿದೆ ಎನ್ನುತ್ತಿದ್ದಾರೆ . ಕೂಲಂಕುಷ ತಪಾಸಣೆ ನಂತರ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ವೈದ್ಯರ ಸಲಹೆಯನ್ನು ಪಡೆದು ಮುಂದಿನ ತೀರ್ಮಾನ ಮಾಡಲು ಲೋಕಾಯುಕ್ತ ಪೊಲೀಸರು ನಿರ್ಧಾರ ಮಾಡಿದ್ದಾರೆ.

ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಪೊಲೀಸರು ಮಾಡಾಳು ವಿರೂಪಾಕ್ಷಪ್ಪರನ್ನು ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಿದ್ರು.

ಹೆಚ್ಚಿನ ಸುದ್ದಿ

error: Content is protected !!