Sunday, July 7, 2024
Homeಟಾಪ್ ನ್ಯೂಸ್NEET Exam: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರ ಬರೆದ ದೀದಿ!

NEET Exam: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರ ಬರೆದ ದೀದಿ!

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರೀಕ್ಷೆಯ ನಿರ್ವಹಣೆಯಲ್ಲಿ ತೊಡಗಿರುವ ಅಧಿಕಾರಿಗಳು ಲಂಚ ಪಡೆಯುವುದು ಮತ್ತು ಪೇಪರ್ ಸೋರಿಕೆಯಲ್ಲಿ ಭಾಗಿಯಾಗುವುದು. ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಸಹಕರಿಸುವುದು. ಗ್ರೇಸ್ ಮಾರ್ಕ್ಸನ ವಿಚಾರ ಈ ರೀತಿಯ ಗಂಭೀರ ಸಮಸ್ಯೆಗಳು ಕಂಡು ಬರುತ್ತಿದೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಪತ್ರದಲ್ಲಿ ಬ್ಯಾನರ್ಜಿ ಹೇಳಿದ್ದಾರೆ.

ಇಂತಹ ನಿದರ್ಶನಗಳು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಹಂಬಲಿಸುತ್ತಿರುವ ವಿದ್ಯಾರ್ಥಿಗಳ ವೃತ್ತಿ ಮತ್ತು ಆಕಾಂಕ್ಷೆಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ, 2017ರ ಮೊದಲು, ರಾಜ್ಯಗಳು ತಮ್ಮದೇ ಆದ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಿದ್ದವು ಮತ್ತು ಕೇಂದ್ರ ಸರ್ಕಾರವು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ತನ್ನದೇ ಆದ ಪರೀಕ್ಷೆಗಳನ್ನು ನಡೆಸುತ್ತಿತ್ತು. ಈ ವ್ಯವಸ್ಥೆಯು ಸುಗಮವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಸುದ್ದಿ