Saturday, January 25, 2025
Homeದೇಶರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮೂವರ ಸಾವು

ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮೂವರ ಸಾವು

ಕ್ಯಾಲಿಕಟ್: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಮೃತಪಟ್ಟಿದ್ದು, 9 ಮಂದಿಗೆ ಗಾಯವಾಗಿದೆ. ಈ ಘಟನೆ ಕ್ಯಾಲಿಕಟ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ನಡೆದಿದೆ. ಎಕ್ಸ್‌ಪ್ರೆಸ್ ರೈಲಿಗೆ ಹತ್ತುವ ವಿಚಾರವಾಗಿ ಜಗಳವಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದಾನೆ. ಸ್ಥಳದಲ್ಲಿದ್ದ ಮತ್ತಿಬ್ಬರಿಗೂ ಬೆಂಕಿ ಅಂಟಿಕೊಂಡಿದ್ದು, ಓರ್ವ ವ್ಯಕ್ತಿ, ಮಹಿಳೆ ಹಾಗೂ ಮಗು ಮೃತಪಟ್ಟಿದ್ದಾರೆ. 9 ಮಂದಿ ಗಾಯಗೊಂಡಿದ್ದಾರೆ. ಬೆಂಕಿ ಹಚ್ಚಿದ ಬಳಿಕ ವ್ಯಕ್ತಿ ರೈಲಿನ ಚೈನ್ ಎಳೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಬಗ್ಗೆ ಪ್ರಯಾಣಿಕರು ರೈಲ್ವೆ ರಕ್ಷಣಾ ಪಡೆಗೆ (ಆರ್‌ಪಿಎಫ್) ಮಾಹಿತಿ ನೀಡಿ ಬೆಂಕಿ ನಂದಿಸಿದ್ದಾರೆ. ಕೆಲವು ಗಂಟೆಗಳ ನಂತರ, ಎಲತ್ತೂರು ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!