ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ವಾಪಾಸಾಗುತ್ತಿದ್ದ ವೇಳೆ ಆಟೋ ಹಳ್ಳಕ್ಕೆ ಉರುಳಿ ಬಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿ ಆಟೋ ಒಂದು ಹಳ್ಳಕ್ಕೆ ಉರುಳಿ ಬಿದಿದ್ದು, 17 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಮಂಡ್ಯ ಜಿಲ್ಲೆಯ ಅರಕೆರೆ-ಮಹದೇವಪುರ ಮಾರ್ಗ ಮಧ್ಯೆ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮಹದೇವಪುರಕ್ಕೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ.
ಗಾಯಾಳು ವಿದ್ಯಾರ್ಥಿಗಳಿಗೆ ಅರಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.