ಚುನಾವಣೆ ಕಣ ರಂಗೇರುತ್ತಿದ್ದಂತೆ ಅಪರಾಧ ಜಗತ್ತಿನ ಮೇಲೆ ನಿಗಾ ವಹಿಸಲು ಪೊಲೀಸ್ ಇಲಾಖೆ ಆರಂಭಿಸಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 60 ರೌಡಿಶೀಟರ್‌ಗಳ ಮನೆ ಮೇಲೆ ಏಕಾಏಕಿ ಪೊಲೀಸರು ದಾಳಿ ನಡೆಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ರೌಡಿಶೀಟರ್‌ಗಳು ತಮ್ಮ ಪ್ರಭಾವ ಇರುವ ಪ್ರದೇಶಗಳಲ್ಲಿ ಬಾಲ ಬಿಚ್ಚಬಾರದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ ನಡೆದಿದೆ ಎಂದು ಮಂಗಳೂರು ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ.
ಶನಿವಾರ ಮುಂಜಾನೆ ಈ ದಾಳಿ ನಡೆಸಿದ್ದು, ವಶಕ್ಕೆ ಪಡೆದುಕೊಂಡ ರೌಡಿಗಳ ಪ್ರಸಕ್ತ ಚಲನವಲನದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.