ಬೀದರ್: ನಾಡಿನಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಶಿಕ್ಷಕರೇ ವಿದ್ಯಾರ್ಥಿಗಳು ನಕಲು ಮಾಡಲು ಸಹಾಯ ಮಾಡಿದ್ದಾರೆ. ಈ ಹಿನ್ನೆಲೆ 9 ಶಿಕ್ಷಕರನ್ನು ಅಮಾನತ್ತು ಮಾಡಲಾಗಿದೆ.
ವಿದ್ಯಾರ್ಥಿಗಳು ನಕಲು ಮಾಡದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಲೆಂದು ಕಣ್ಣಿಡಬೇಕಾದ ಶಿಕ್ಷಕರೇ ನಕಲು ಮಾಡಲು ಸಹಾಯ ಮಾಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಶಿವಾಜಿ ಶಾಲೆಯಲ್ಲಿ ಗುರುವಾರ ನಡೆದ ಇಂಗ್ಲಿಷ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡಲು ಶಿಕ್ಷಕರು ಪ್ರೋತ್ಸಾಹ ನೀಡುತ್ತಿದ್ದರು. ಈ ವೇಳೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಭೇಟಿ ಕೊಟ್ಟಾಗ ಸಾಮೂಹಿಕ ನಕಲು ಮಾಡುತ್ತಿರುವುದು ಕಂಡು ಬಂದಿದೆ.
ಈ ಹಿನ್ನೆಲೆ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರೋತ್ಸಾಹ ಕೊಟ್ಟಿರುವ ಆರೋಪದಡಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, 9 ಶಿಕ್ಷಕರನ್ನು ಅಮಾನತ್ತು ಮಾಡಿದ್ದಾರೆ.