ನವದೆಹಲಿ: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತೀಯ ಕ್ರಿಕೆಟ್ ತಂಡವು ಭಾಗವಹಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ವಕ್ತಾರ ರಣಧೀರ್ ಜೈಸ್ವಾಲ್ ದೃಢಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರತೆಯ ಬಗ್ಗೆ ಕಳವಳವನ್ನು ಪುನರುಚ್ಚಸಿದ್ದಾರೆ. ಬಿಸಿಸಿಐ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ಭದ್ರತಾ ಕಾಳಜಿಯ ದೃಷ್ಟಿಯಿಂದ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿಸಿದರು.
#WATCH | Delhi: On Indian cricket team participating in Pakistan, MEA Spokesperson Randhir Jaiswal says, “… The BCCI has issued a statement… They have said that there are security concerns there and therefore it is unlikely that the team will be going there…” pic.twitter.com/qRJPYPejZd
— ANI (@ANI) November 29, 2024
ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತ 2008ರಿಂದ ಪಾಕಿಸ್ತಾನಕ್ಕೆ ಪ್ರವಾಸ ಮಾಡಿಲ್ಲ. 2025ರ ಫೆಬ್ರವರಿ- ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯು ಎರಡು ರಾಷ್ಟ್ರಗಳ ನಡುವಿನ ವಿವಾದಾತ್ಮಕ ವಿಷಯವಾಗಿದೆ. BCCI ಹೈಬ್ರಿಡ್ ಮಾದರಿಯನ್ನು ಪ್ರಸ್ತಾಪಿಸಿದೆ. ಇದರಲ್ಲಿ ಭಾರತದ ಪಂದ್ಯಗಳನ್ನು ಯುಎಇಯಲ್ಲಿ ಆಡಲಿದ್ದು, ಇತರ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯುತ್ತವೆ ಎಂದು ಹೇಳಿದೆ. ಆದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಸಲಹೆಯನ್ನು ವಿರೋಧಿಸಿದೆ.