ಕಾಂಗ್ರೆಸ್ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. 42 ಕ್ಷೇತ್ರಗಳಿಗೆ ಅಭ್ಯರ್ಥೀಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸದೇ, ಅಲ್ಲಿನ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿದೆ.
ಕಳೆದ ಚುನಾವಣೆಯಲ್ಲಿಯೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸದೆ ದಿವಂಗತ ರೈತ ಹೋರಾಟಗಾರ ಕೆ.ಎಸ್ ಪುಟ್ಟಣ್ಣಯ್ಯನವರ ಪುತ್ರ ದರ್ಶನ್ ಪುಟ್ಟಣ್ಣಯ್ಯರಿಗೆ ಬೆಂಬಲ ಘೋಷಿಸಿತ್ತು.
ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟ ಭದ್ರವಾಗಿರುವ ಮೇಲುಕೋಟೆಯಲ್ಲಿ ರೈತ ನಾಯಕ ಕೆಎಸ್ ಪುಟ್ಟಣ್ಣಯ್ಯ ಅವರು ಶಾಸಕಾರಗಿದ್ದರು. 2018 ರ ಚುನಾವಣೆಯಲ್ಲಿ ಜೆಡಿಎಸ್ ನ ಸಿಎಸ್ ಪುಟ್ಟರಾಜು ಅವರು ದರ್ಶನ್ ಪುಟ್ಟಣ್ಣಯ್ಯ ವಿರುದ್ಧ 22 ಸಾವಿರ ಚಿಲ್ಲರೆ ಅಂತರದಲ್ಲಿ ಗೆಲುವು ಸಾಧಿಸಿದ್ದರು.