ನವದೆಹಲಿ: ಹನುಮಾನ್ ಜಯಂತಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸೂಚನೆಗಳನ್ನು ನೀಡಿದೆ.
ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬಿಹಾರ, ಪಶ್ಚಿಮ ಬಂಗಾಳ ಸೇರಿ ದೇಶದ ಹಲವೆಡೆ ಭಾರೀ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ಎಚ್ಚರಿಕೆಯನ್ನು ನೀಡಿದೆ.
ಸರಕಾರಗಳು ಹನುಮ ಜಯಂತಿಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಹಬ್ಬ ಶಾಂತಿಯುತವಾಗಿ ನಡೆಯಬೇಕು. ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ವಿಷಯಗಳ ಬಗ್ಗೆ ನಿಗಾ ಇಡಬೇಕು’ ಎಂದು ಗೃಹ ಸಚಿವಾಲಯ ತಿಳಿಸಿದೆ.