ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ. ಈ ವೇಳೆ ಕೆಪಿಸಿಸಿಗೆ ಅರ್ಜಿ ಸಲ್ಲಿಸದೇ ವಲಸಿಗರು ಟಿಕೆಟ್ ಗಿಟ್ಟಿಸಿ ಕೊಂಡಿದ್ದಾರೆ.
ಎರಡನೇ ಪಟ್ಟಿಯಲ್ಲಿ, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಮೊಳಕಾಲ್ಮುರು ಎಸ್ ಟಿ ಮೀಸಲು ಕ್ಷೇತ್ರದ ಟಿಕೆಟ್ ಪಡೆದುಕೊಂಡಿದ್ದಾರೆ.
ಮೂಲತಃ ಕಾಂಗ್ರೆಸ್‌ನಲ್ಲಿದ್ದ ಎನ್ ವೈ ಗೋಪಾಲಕೃಷ್ಣ ಬಿಜೆಪಿ ಸೇರಿ ಕೂಡ್ಲಿಗಿ ಕ್ಷೇತ್ರದಿಂದ ಶಾಸಕರಾಗಿದ್ದರು. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಇನ್ನು ಮೈಸೂರಿನಲ್ಲಿ, ಜಿಟಿ ದೇವೇಗೌಡರನ್ನು ಎದುರು ಹಾಕಿ ಜೆಡಿಎಸ್ ನಿಂದ ಕಾಂಗ್ರೆಸ್ ಸೇರಿರುವ ಮಾವಿನಹಳ್ಳಿ ಸಿದ್ದೇಗೌಡ ಅವರಿಗೆ ಕೂಡಾ ಪಕ್ಷ ಟಿಕೆಟ್ ನೀಡಿದೆ. ಅವರು ಕೂಡಾ ಟಿಕೆಟ್ ಗಾಗಿ ಅರ್ಜಿ ಸಲ್ಲಿಸದೆ ಟಿಕೆಟ್ ಪಡೆದುಕೊಂಡಿದ್ದಾರೆ.
ಸಿದ್ದೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಹೊತ್ತಿಗಾಗಲೇ ಟಿಕೆಟ್ ಗಾಗಿ ಅರ್ಜಿ ಸಲ್ಲಿಸುವ ದಿನಾಂಕ ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅವರು ಅರ್ಜಿ ಸಲ್ಲಿಸಿರಲಿಲ್ಲ.