Sunday, July 7, 2024
Homeಕ್ರೈಂCRIME : ಕಾಲೇಜಿನಲ್ಲಿ ಮಗುವಿಗೆ ಜನ್ಮ ಕೊಟ್ಟ ಪ್ರಕರಣ - ಅಪ್ರಾಪ್ತೆಯ ಮೇಲೆ ದೌರ್ಜನ್ಯವೆಸಗಿದ್ದವನ ಬಂಧನ!

CRIME : ಕಾಲೇಜಿನಲ್ಲಿ ಮಗುವಿಗೆ ಜನ್ಮ ಕೊಟ್ಟ ಪ್ರಕರಣ – ಅಪ್ರಾಪ್ತೆಯ ಮೇಲೆ ದೌರ್ಜನ್ಯವೆಸಗಿದ್ದವನ ಬಂಧನ!

ಕೋಲಾರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಕಾಲೇಜು ಹೊಟ್ಟೆನೋವು ಎಂದು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ, ಹೆರಿಗೆ ನೋವು ತಾಳಲಾರದೆ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. 

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಆರೋಪಿ ಅನಿಲ್ ಕುಮಾರ್ (21) ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ  ಪೋಕ್ಸೋ ಕೇಸ್ ದಾಖಲಿಸಲಾಗಿದೆ . 

ಹೆಚ್ಚಿನ ಸುದ್ದಿ