Friday, March 13, 2026
Homeಬೆಂಗಳೂರುಮಹಿಳೆಯೊಂದಿಗೆ ಅಸಭ್ಯ ವರ್ತನೆ: ಕೆಲಸದಿಂದ ಟಿಟಿಇ ವಜಾ

ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಕೆಲಸದಿಂದ ಟಿಟಿಇ ವಜಾ

ಬೆಂಗಳೂರು: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಿದ್ದ ರೈಲ್ವೆ ಟಿಕೆಟ್ ಪರೀಕ್ಷಕನನ್ನು (ಟಿಟಿಇ) ಕೆಲಸದಿಂದ ವಜಾಗೊಳಿಸಲಾಗಿದೆ.

ಮಾರ್ಚ್ 14 ರಂದು ಕೃಷ್ಣರಾಜಪುರಂ ರೈಲು ನಿಲ್ದಾಣದಲ್ಲಿ ಯುವತಿಯೊಂದಿಗೆ ಸಂತೋಷ್ ಕುಮಾರ್ ಅನುಚಿತವಾಗಿ ವರ್ತಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. ಸತತ ದೂರುಗಳು ಬಂದ ಹಿನ್ನೆಲೆಯಲ್ಲಿ ಟಿಟಿಇ ವಿ.ಸಂತೋಷ್ ಕುಮಾರನನ್ನು ನೈಋತ್ಯ ರೈಲ್ವೆ ವಲಯವು ಸೇವೆಯಿಂದ ವಜಾಗೊಳಿಸಿದೆ.

ಮಾ.17ರಂದು ಐಪಿಸಿಯ ಸೆಕ್ಷನ್ 354 ಅಡಿಯಲ್ಲಿ ಬೆಂಗಳೂರು ಕಂಟೋನ್ಮೆಂಟ್‌ನಲ್ಲಿರುವ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಂತೋಷ್ ವಿರುದ್ಧ ಕ್ರಮ ಕೈಗೊಂಡಿದ್ದ ಅಧಿಕಾರಿಗಳು, ಆವರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು. ಇದೀಗ ರೈಲ್ವೇ ಆಂತರಿಕ ವಿಭಾಗ ಸಂತೋಷ್ ವಿರುದ್ಧ ಮೂರು ಆರೋಪಟ್ಟಿಗಳನ್ನು ಸಲ್ಲಿಸಿದ್ದು, ಆರೋಪ ಪಟ್ಟಿ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!