Sunday, July 7, 2024
Homeಚುನಾವಣೆ 2023Mizoram Election Results: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್: ಯಾರ ಕೊರಳಿಗೆ ವಿಜಯದ ಮಾಲೆ

Mizoram Election Results: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್: ಯಾರ ಕೊರಳಿಗೆ ವಿಜಯದ ಮಾಲೆ

ನವದೆಹಲಿ: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯ ಪೈಕಿ ರಾಜಸ್ಥಾನ (Rajasthan), ಮಧ್ಯಪ್ರದೇಶ (Madhya Pradesh), ಛತ್ತೀಸ್ ಗಢ (Chattisgarh) ಮತ್ತು ತೆಲಂಗಾಣ (Telangana) ರಾಜ್ಯಗಳ ಚುನಾವಣಾ ಫಲಿತಾಂಶಗಳು ಹೊರಬಿದ್ದಿದೆ. ಈಗ ಎಲ್ಲರ ಕಣ್ಣು ಮಿಜೋರಾಂ (Mijoram) ಮೇಲೆ ನೆಟ್ಟಿದೆ. ನಿನ್ನೆ ನಡೆಯಬೇಕಿದ್ದ ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಇಂದಿಗೆ ಮುಂದೂಡಲಾಗಿದ್ದು, ಮೊದಲಿಗೆ ಡಿಸೆಂಬರ್ 3ಕ್ಕೆ ಫಲಿತಾಂಶ ನಿಗದಿಯಾಗಿತ್ತು. ಆದರೆ ಮಿಜೋರಾಂ ಜನರಿಗೆ ಪ್ರಮುಖವಾಗಿರುವ ಸ್ಥಳೀಯ ಹಬ್ಬ ರಾಜ್ಯಾದ್ಯಂತ ಜೋರಾಗಿ ನಡೆಯುವುದರಿಂದ ಒಂದು ದಿನ ಮುಂದೂಡಲಾಗಿತ್ತು. ಹೀಗಾಗಿ ಇಂದು ಫಲಿತಾಂಶ ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ವೇಳೆಗೆ ಫಲಿತಾಂಶ ಹೊರ ಬೀಳಲಿದೆ.

ತ್ರಿಕೋನ ಕಠಿಣ ಸ್ಪರ್ಧೆ

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನಾಲ್ವರು ಪ್ರಮುಖ ಪಕ್ಷಗಳು ಕಣದಲ್ಲಿದ್ದಾರೆ ಎಂಬುದು ಗಮನಾರ್ಹ. ಇದರಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF), ಕಾಂಗ್ರೆಸ್, ಭಾರತೀಯ ಜನತಾ ಪಕ್ಷ (BJP) ಮತ್ತು ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಸೇರಿವೆ. ಪ್ರಮುಖ ಎಕ್ಸಿಟ್ ಪೋಲ್‌ಗಳು ಮೂರು ಪಕ್ಷಗಳ ನಡುವೆ ಕಠಿಣ ಸ್ಪರ್ಧೆಯನ್ನು ಭವಿಷ್ಯ ನುಡಿದಿವೆ.

ಮೊದಲ ಬಾರಿಗೆ ಬಿಜೆಪಿ ಗೆಲುವು

ಒಂದು ವರ್ಷದ ಹಿಂದೆ ರಚಿಸಲಾದ ಹೊಸ ಪ್ರಾದೇಶಿಕ ಪಕ್ಷವಾದ ZPM 8 ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನ ಪಡೆದಿದ್ದರೆ, 5 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ (Congress) ಮೂರನೇ ಸ್ಥಾನಕ್ಕೆ ಕುಸಿದಿದೆ. ಕ್ರಿಶ್ಚಿಯನ್ ಪ್ರಾಬಲ್ಯದ ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಒಂದು ಸ್ಥಾನವನ್ನು ಗೆದ್ದು ಗೆಲುವು ದಾಖಲಿಸಿದೆ.

ಶೇ.80ಕ್ಕೂ ಹೆಚ್ಚು ಮತದಾನ

40 ಸದಸ್ಯರ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ಶಾಂತಿಯುತವಾಗಿ ನಡೆದಿತ್ತು. ಶೇಕಡಾ 80 ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಈ ಬಾರಿ ಮಿಜೋರಾಂನಲ್ಲಿ ಶೇ.81.25ರಷ್ಟು ಮಹಿಳಾ ಮತದಾರರು ಹಾಗೂ ಶೇ.80.04ರಷ್ಟು ಪುರುಷ ಮತದಾರರು ಮತ ಚಲಾಯಿಸಿದ್ದಾರೆ. ರಾಜ್ಯದ ಒಟ್ಟು 8.52 ಲಕ್ಷ ಮತದಾರರಲ್ಲಿ ಶೇ.174 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ರಾಜ್ಯದ ಎಲ್ಲಾ 11 ಜಿಲ್ಲೆಗಳ ಪೈಕಿ, ಸೆರ್ಚಿಪ್ ಜಿಲ್ಲೆಯಲ್ಲಿ ಅತಿ ಹೆಚ್ಚು 84.78% ಮತದಾನ ದಾಖಲಾಗಿದ್ದು, ಮಾಮಿತ್ ಜಿಲ್ಲೆಯಲ್ಲಿ 84.65%, ಹನ್ಹಥಿಯಾಲ್ ಜಿಲ್ಲೆಯಲ್ಲಿ 84.19% ಮತ್ತು ಲುಂಗ್ಲೈ ಜಿಲ್ಲೆಯಲ್ಲಿ 83.68% ಮತದಾನವಾಗಿದೆ.

174 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

18 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್ಮೆಂಟ್ (ಝಡ್ಪಿಎಂ) ಮತ್ತು ಕಾಂಗ್ರೆಸ್ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು. ಇದಕ್ಕೆ ಹೋಲಿಸಿದರೆ, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಕ್ರಮವಾಗಿ 23 ಮತ್ತು 4 ಸ್ಥಾನಗಳಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿವೆ.

2018ರ ನವೆಂಬರ್​ ನಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಎಂಎನ್ಎಫ್ 26 ಸ್ಥಾನಗಳನ್ನು, ಜಡ್​ಪಿಎಂ 8 ಸ್ಥಾನಗಳನ್ನು, ಕಾಂಗ್ರೆಸ್ 5 ಮತ್ತು ಬಿಜೆಪಿ 1 ಸ್ಥಾನಗಳನ್ನು ಗೆದ್ದಿದೆ. 40 ಸದಸ್ಯರ ಮಿಜೋರಾಂ ವಿಧಾನಸಭೆಯ ಫಲಿತಾಂಶಗಳು ಇಂದು ಪ್ರಕಟವಾಗಲಿದೆ. ಯಾರ ಕೊರಳಿಗೆ ವಿಜಯದ ಮಾಲೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸುದ್ದಿ