Thursday, March 27, 2025
Homeಟಾಪ್ ನ್ಯೂಸ್ಎಕ್ಸ್‌ಪ್ರೆಸ್‌ ವೇ ಅವಾಂತರ : ಅನಿತಾ ಕುಮಾರಸ್ವಾಮಿ ಗರಂ

ಎಕ್ಸ್‌ಪ್ರೆಸ್‌ ವೇ ಅವಾಂತರ : ಅನಿತಾ ಕುಮಾರಸ್ವಾಮಿ ಗರಂ

ಬೆಂಗಳೂರು ಮೈಸೂರು ದಶಪಥ ರಸ್ತೆ ಅವಾಂತರ ಕಂಡು ಅನಿತಾ ಕುಮಾರಸ್ವಾಮಿ ಕೆಂಡ ಕಾರಿದ್ದಾರೆ. ನೆನ್ನೆ ಸುರಿದ ಅಲ್ಪ ಮಳೆಗೆ ಹೆದ್ದಾರಿ ಜಲಾವೃತವಾಗಿದ್ದಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಗರಂ ಆಗಿದ್ದಾರೆ

ಹೆದ್ದಾರಿ ಅವ್ಯವಸ್ಥೆ ಕುರಿತು ಸರಣಿ ಟ್ವೀಟ್ ಮಾಡಿರುವ ಅನಿತಾ ಕುಮಾರಸ್ವಾಮಿ, ಮೊದಲು ಬಾಕು ಇರುವ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿವವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಬಲ್ ಎಂಜಿನ್ ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ಟ್ವೀಟ್ ಮಾಡಿರುವ ಅನಿತಾ ಕುಮಾರಸ್ವಾಮಿ ಹೆದ್ದಾರಿ ಅವಾಂತರ ವಿಷಯಕ್ಕೆ #ಎಕ್ಸ್_ಪ್ರೆಸ್_ಹೆಮ್ಮಾರಿ ಟ್ಯಾಗ್ ಬಳಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ

ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಉದ್ಘಾಟನೆ ಮಾಡಿಸಿದ ಈ ‘ ಚುನಾವಣಾ ಗಿಮಕ್ ‘ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? ಎಂದು ಅನಿತಾ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೇ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ? ಎಂದು ಶಾಸಕಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!