Thursday, March 27, 2025
Homeಟಾಪ್ ನ್ಯೂಸ್ಅಗ್ನಿ ದುರಂತ –ಮೊಬೈಲ್ ಅಂಗಡಿ ಭಸ್ಮ

ಅಗ್ನಿ ದುರಂತ –ಮೊಬೈಲ್ ಅಂಗಡಿ ಭಸ್ಮ

ಬೆಂಗಳೂರು: ಚಾರ್ಜಿಂಗ್ ಹಾಕಿದ್ದ ಮೊಬೈಲ್ ಸ್ಫೋಟಗೊಂಡು ಮೊಬೈಲ್ ಅಂಗಡಿ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿರುವ ಘಟನೆ ವಿಜಯನಗರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಈ ದುರಂತ ಸಂಭವಿಸಿರಬಹುದೆಂದು ಊಹಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ, ನೋವುಗಳು ವರದಿಯಾಗಿಲ್ಲ. ಅಗ್ನಿಶಾಮಕ ದಳದವರು ಕೂಡಲೇ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!