Monday, April 13, 2026
Homeಟಾಪ್ ನ್ಯೂಸ್ಬಂಡೀಪುರಕ್ಕೆ ಮೋದಿ ಭೇಟಿ: ಇಂದಿನಿಂದ ವಾಹನ ಸಂಚಾರ ಬಂದ್‌

ಬಂಡೀಪುರಕ್ಕೆ ಮೋದಿ ಭೇಟಿ: ಇಂದಿನಿಂದ ವಾಹನ ಸಂಚಾರ ಬಂದ್‌

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ. ಬಂಡೀಪುರ ಹೊರ ವಲಯದ ಮೇಲುಕಾಮನಹಳ್ಳಿ ಬಳಿ 3 ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದ್ದು, ಮೋದಿ ಭೇಟಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭದ್ರತಾ ಕ್ರಮವಾಗಿ ಶುಕ್ರವಾರ ಸಂಜೆ 4 ಗಂಟೆಯಿಂದಲೇ ಬಂಡೀಪುರ ಮಾರ್ಗವಾಗಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.ಇಂದು ಸಂಜೆ 4 ಗಂಟೆಯಿಂದ ಎಲ್ಲಾ ರೀತಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಇರಲಿದೆ. 

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ NH 766 ರಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇಂದು ಸಂಜೆ 4 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈಗಾಗಲೇ ಏಪ್ರಿಲ್‌ 6ರಿಂದಲೇ ಸಫಾರಿ, ರೆಸಾರ್ಟ್, ಹೋಂ ಸ್ಟೇ, ರೆಸಾರ್ಟ್ ‌ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ರೀತಿಯ ಡ್ರೋನ್ ಹಾರಾಟ ನಡೆಸದಂತೆ ಜಿಲ್ಲಾಧಿಕಾರಿ ರಮೇಶ್ ಆದೇಶಿಸಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!