Friday, March 21, 2025
Homeಟಾಪ್ ನ್ಯೂಸ್ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿ ಅರೆಸ್ಟ್

ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿ ಅರೆಸ್ಟ್

 ಬೆಂಗಳೂರು: ರಾಮನಗರದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವವಾದಿ ಕಾರ್ಯಕರ್ತ ಪುನೀತ್ ‌ಕೆರೆಹಳ್ಳಿ ಬಂಧನವಾಗಿದೆ.

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರು ಏಪ್ರಿಲ್ 05 ರಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.‌

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಕಳೆದ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ವಾಹನಕ್ಕೆ ಗೋರಕ್ಷಣೆಯ ಹೆಸರಿನಲ್ಲಿ ಕೆರೆಹಳ್ಳಿ ಗ್ಯಾಂಗ್‌ ಅಟ್ಯಾಕ್‌ ಮಾಡಿತ್ತು. ಬಳಿಕ, ಇದ್ರೀಸ್ ಪಾಷ ಎನ್ನುವ 39 ವರ್ಷದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಗೋರಕ್ಷಣೆ ಹೆಸರಿನಲ್ಲಿ ಪುನೀತ್‌ ತಂಡವೇ ಇದ್ರೀಸ್‌ ರನ್ನು ಕೊಂದಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

 ಅಲ್ಲದೆ, ಜಾನುವಾರಿ ವ್ಯಾಪಾರಿಗಳಿಗೆ ಕರೆಂಟ್‌ ಶಾಕ್‌ ಕೊಡುವ, ದೊಣ್ಣೆ, ಬ್ಯಾಟ್‌ಗಳಿಂದ ಹಲ್ಲೆ ಮಾಡುವ ವಿಡಿಯೋಗಳನ್ನು ಕೂಡಾ ಪುನೀತ್‌ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ. ಕೊಲೆ ಆರೋಪ ಕೇಳಿ ಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಪುನೀತ್‌, ಫೇಸ್‌ಬುಕ್‌ ಲೈವ್‌ಗೆ ಬಂದು ತಾನು ದೇವಸ್ಥಾನಗಳ ಯಾತ್ರೆಯಲ್ಲಿದ್ದೇನೆ, ಮತಕ್ಕಾಗಿ ಕಾಂಗ್ರೆಸ್‌ ಇದ್ರೀಸ್‌ನ ಕೊಲೆ ಮಾಡಿ ನಮ್ಮ ಮೇಲೆ ಆರೋಪ ಹೊರಿಸಿದೆ ಎಂದು ಹೇಳಿದ್ದರು.

ಹೆಚ್ಚಿನ ಸುದ್ದಿ

error: Content is protected !!