Wednesday, February 19, 2025
Homeಟಾಪ್ ನ್ಯೂಸ್CONVERSION: ಗೆಳತಿಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವ್ಯಕ್ತಿ!

CONVERSION: ಗೆಳತಿಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವ್ಯಕ್ತಿ!

ಲಕ್ನೋ: 10 ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾಗಲು ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ.

34 ವರ್ಷದ ಸದ್ದಾಂ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಶಂಕರ್‌ ಎಂದು ಬದಲಿಸಿಕೊಂಡಿದ್ದಾನೆ. ಕೆಲ ದಿನಗಳ ಹಿಂದೆ ಯುವತಿ ಸದ್ದಾಂ ಹಾಗೂ ಆತನ ಕುಟುಂಬದವರ ವಿರುದ್ಧ ಮದುವೆ ನೆಪದಲ್ಲಿ ಅತ್ಯಾಚಾರ, ಗರ್ಭಪಾತ ಮಾಡಿಸಲು ಒತ್ತಾಯಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.

ಸದ್ದಾಂ ಹಾಗೂ ಹಿಂದೂ ಯುವತಿ ಪರಸ್ಪರ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದ್ದವರಾಗಿದ್ದರಿಂದ ಸದ್ದಾಂ ಕುಟುಂಬ ಮದುವೆಗೆ ನಿರಾಕರಿಸಿತ್ತು. ಮೂರು ದಿನಗಳ ಹಿಂದೆ ಮಹಿಳೆ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಳು. ಇದೀಗ ಜೋಡಿ ಪರಸ್ಪರ ಒಪ್ಪಿ ಮದುವೆಯಾಗಿದ್ದಾರೆ ಎಂದು ಕೊತ್ವಾಲಿ ಠಾಣೆಯ ಪೊಲೀಸರು ಹೇಳಿದ್ದಾರೆ.

ಸದ್ದಾಂ ಹಿಂದೂ ಧರ್ಮಕ್ಕೆ ಮತಾಂತರವಾಗಿ, ತನ್ನ ಹೆಸರನ್ನು ಶಿವಶಂಕರ್‌ ಎಂದು ಬದಲಾಯಿಸಿಕೊಂಡು ಹಿಂದೂ ಸಂಪ್ರದಾಯದಂತೆ ದೇವಾಲಯದಲ್ಲಿ ಯುವತಿಯನ್ನು ವಿವಾಹವಾಗಿದ್ದಾನೆ.

ಹೆಚ್ಚಿನ ಸುದ್ದಿ

error: Content is protected !!