ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಬಿಳಿ ಬಣ್ಣದ ಎಲೆಕ್ಟ್ರಾನಿಕ್ ಬಲೂನು ಪತ್ತೆಯಾಗಿದೆ. ಬಲೂನ್ ಕಂಡ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಲೂನು ಎಲ್ಲಿಂದ, ಯಾವಾಗ ಹಾರಿ ಬಂದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಸ್ಥಳೀಯರಿಗೆ ಲಭ್ಯವಾಗಿಲ್ಲ. ಬಲೂನಿನಲ್ಲಿ ಬ್ಯಾಟರಿ, ಕನೆಕ್ಟರ್ ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಅಮೆರಿಕದಲ್ಲಿ ಪತ್ತೆಯಾಗಿದ್ದ ಚೈನಾದ ಸ್ಪೈ ಬಲೂನು ರೀತಿಯಲ್ಲೇ ಇದನ್ನೇನಾದ್ರೂ ಹಾರಿಸಲಾಗಿದ್ಯಾ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ