ಸುತ್ತೂರು : ಸುತ್ತೂರು (Suttur) ಜಾತ್ರಾ ಮಹೋತ್ಸವ ಅಂತಿಮ ಹಂತಕ್ಕೆ ಬಂದಿದ್ದು, ಸಾವಿರಾರು ಜನರು ಜಾತ್ರೆಯಲ್ಲಿ ಪಾಲ್ಗೊಂಡು ಸಂತಸಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ನಿನ್ನೆ ಭಾನುವಾರ ಮೂರು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಸಂಭವಿಸಿದೆ.
ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೂ ಕೂಡ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಸುತ್ತೂರು ಕ್ಷೇತ್ರದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ತೆರಳುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಸಿಎಂ ಪರದಾಡಿದ್ದಾರೆ.
ಸುತ್ತೂರು ಕ್ಷೇತ್ರಕ್ಕೆ ತೆರಳುವ ಮಾರ್ಗದಲ್ಲಿ ಮೂರು ಕಿ.ಮಿ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಜನರು ಹಾಗೂ ರಾಜಕಾರಣಿಗಳು ಒದ್ದಾಡಿದ್ದಾರೆ. ಇದೇ ವೇಳೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೂಡ ಸಂಚಾರದಟ್ಟಣೆಯಲ್ಲಿ ಸಿಲುಕಿಕೊಂಡಿದ್ದಾರೆ.
ಸಂಚಾರ ದಟ್ಟಣೆ ನಿಯಂತ್ರಿಸಲು ಸ್ವತಃ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ. ಟ್ರಾಫಿಕ್ ಜಾಮ್ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ದಾರಿ ಮಾಡಿ ಕೊಡಲು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸಪಟ್ಟಿದ್ದಾರೆ.
ಇದೇ ವೇಳೆ ಬೈಕ್ ಒಂದೆಡೆ ಬಸ್ ಮತ್ತೊಂದೆಡೆ ಬೈಕ್ ಸವಾರ ಮುನ್ನುಗ್ಗುತ್ತಿದ್ದಂತೆ ಕೋಪಗೊಂಡ ಎಸ್ ಪಿ ಬೈಕ್ ಸವಾರನಿಗೆ ಕಾಲಿನಿಂದ ಒದೆಯಲು ಮುಂದಾಗಿರುವ ಘಟನೆ ಕೂಡ ನಡೆದಿದೆ. ಅರ್ಧ ಗಂಟೆಗೂ ಹೆಚ್ಚು ಕಲಾ SP ಬಾಲದಂಡಿ ಹಾಗೂ ಸಿಬ್ಬಂದಿ ಕಷ್ಟಪಟ್ಟ ಬಳಿಕ ಸಂಚಾರ ದಟ್ಟಣೆ ಕಡಿಮೆಯಾಗಿದೆ.
ಇದನ್ನೂ ಓದಿ: ದಾವಣಗೆರೆ ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಅನುಮಾನಾಸ್ಪದ ಸಾವು!