Thursday, July 16, 2026
Homeಕ್ರೈಂTRAGEDY: ಗ್ಯಾಸ್ ಗೀಸರ್ ಸೋರಿಕೆ, ಸ್ನಾನಕ್ಕೆ ಹೋದ ಯುವತಿ ಉಸಿರುಗಟ್ಟಿ ಸಾ*ವು!

TRAGEDY: ಗ್ಯಾಸ್ ಗೀಸರ್ ಸೋರಿಕೆ, ಸ್ನಾನಕ್ಕೆ ಹೋದ ಯುವತಿ ಉಸಿರುಗಟ್ಟಿ ಸಾ*ವು!

ಕೊಡಗು: ಪ್ರವಾಸಕ್ಕೆಂದು ಕೊಡಗಿಗೆ(Kodagu) ಬಂದಿದ್ದ ಮೈಸೂರು(Mysuru) ಮೂಲದ ಯುವತಿಯೊಬ್ಬಳು ತಂಗಿದ್ದ ಹೋಂಸ್ಟೇಯ ಬಾತ್‌ರೂಮಿನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ(Crime) ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ.

ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತಪಟ್ಟ ದುರ್ದೈವಿ. ವಿನೂ ಕೊಡಗು ಪ್ರವಾಸಕ್ಕಾಗಿ ಆಗಮಿಸಿ ಸೋಮವಾರಪೇಟೆಯ ಚೌಡ್ಲು ಗ್ರಾಮದಲ್ಲಿರುವ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್‌ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ಬಾತ್‌ರೂಮಿನಲ್ಲಿ ಗ್ಯಾಸ್ ಗೀಸರ್‌ನಿಂದ ಅನಿಲ ಸೋರಿಕೆಯಾಗಿದ್ದು, ಅಲ್ಲಿ ಯಾವುದೇ ಕಿಟಕಿ ಅಥವಾ ವೆಂಟಿಲೇಷನ್ ವ್ಯವಸ್ಥೆ ಇಲ್ಲದ ಕಾರಣ ಉಸಿರಾಡಲು ಸಾಧ್ಯವಾಗದೆ ವಿನೂತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರಳೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬ್ಯಾಂಕ್​​​​​​​​​​​​​ನ ಮಹಿಳಾ ಉದ್ಯೋಗಿ ಅನುಮಾನಾಸ್ಪದ ಸಾ*ವು, ಹಳ್ಳದಲ್ಲಿ ಶವವಾಗಿ ಪತ್ತೆ!

ಬಳ್ಳಾರಿ: ಸಹೋದ್ಯೋಗಿಗಳ ಜೊತೆ ಪಾರ್ಟಿಗೆ ಹೋಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಹಂದ್ರಾಳ್‌ ಹಳ್ಳದ ಬಳಿ ನಡೆದಿದೆ.

ಬಳ್ಳಾರಿಯ ಕೌಲ್ ಬಜಾರ್ ನಿವಾಸಿಯಾದ 38 ವರ್ಷದ ಅನಿಷಾ ಫಾತೀಮಾ ಮೃತಪಟ್ಟ ದುರ್ದೈವಿ. ಈಕೆ ಪ್ರಗತಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಶನಿವಾರ ರಾತ್ರಿ ಬ್ಯಾಂಕ್‌ನ ಇತರ ಸಿಬ್ಬಂದಿಯೊಂದಿಗೆ ಪಾರ್ಟಿಗೆ ತೆರಳಿದ್ದರು. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅನಿಷಾ ತಮ್ಮ ಪತಿಗೆ ಕರೆ ಮಾಡಿ ಮಾತನಾಡಿದ್ದರು. ಆದರೆ ಅದಾದ ನಂತರ ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಕುಟುಂಬಸ್ಥರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.

ಭಾನುವಾರ ಬೆಳಿಗ್ಗೆ ಹಂದ್ರಾಳ್ ಹಳ್ಳದ ಪಕ್ಕದ ಜಾಲಿ ಪೊದೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ರಾತ್ರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದರಿಂದ ಹಂದ್ರಾಳ್ ಹಳ್ಳ ತುಂಬಿ ಹರಿಯುತ್ತಿತ್ತು. ಹೀಗಾಗಿ ನೀರಿನ ರಭಸಕ್ಕೆ ಸಿಲುಕಿ ಮಹಿಳೆ ಸ್ಕೂಟರ್ ಸಮೇತ ಕೊಚ್ಚಿ ಹೋಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ಘಟನಾ ಸ್ಥಳದ ಒಂದು ಕಡೆ ಸ್ಕೂಟರ್ ಹಾಗೂ ಮತ್ತೊಂದು ಕಡೆ ಮೃತದೇಹ ಪತ್ತೆಯಾಗಿದೆ.

ನಮ್ಮ ಮನೆ ಹೆಣ್ಣುಮಗಳಿಗೆ ಆದ ಅನ್ಯಾಯ ಮತ್ತೊಬ್ಬರಿಗೆ ಆಗಬಾರದು, ಈ ಸಾವಿನ ಹಿಂದೆ ಇರುವ ನಿಗೂಢತೆಯನ್ನು ಪೊಲೀಸರು ತನಿಖೆ ನಡೆಸಬೇಕು ಎಂದು ಮೃತ ಮಹಿಳೆಯ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸದ್ಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹೆಚ್ಚಿನ ಸುದ್ದಿ

Change Language »
error: Content is protected !!