ನಮ್ಮ ಮೆಟ್ರೋ ಕಡೆಯಿಂದ ನೇರಳೆ ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಐಟಿಪಿಎಲ್ ನಿಂದ ಮೈಸೂರು ರಸ್ತೆಯವರೆಗೆ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಮ್ಮ ಮೆಟ್ರೋ, ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಿನ್ನೆ ಅಂದರೆ 13.03.2025 ರಿಂದ ಬಿಎಂಆರ್‌ಸಿಎಲ್ ನೇರಳೆ ಮಾರ್ಗದ ಐಟಿಪಿಎಲ್ ನಿಂದ ಮೈಸೂರು ರಸ್ತೆಯ ನಡುವೆ ಪ್ರತಿ ಐದು ನಿಮಿಷಕ್ಕೊಂದು ರೈಲು ಸೇವೆಯನ್ನು ವಿಸ್ತರಿಸಲಿದ್ದೇವೆ ಎಂದು ತಿಳಿಸಿದೆ.
ಸಂಜೆ 03.56 ಗಂಟೆಯಿಂದ ರಾತ್ರಿ 08.00 ಗಂಟೆಯವರೆಗೆ 5 ನಿಮಿಷಗಳ ಆವರ್ತನದಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಮೈಸೂರು ರಸ್ತೆಯ ವರೆಗೆ ಪ್ರಯಾಣಿಕರ ದಟ್ಟಣೆ ಹೆಚ್ಚಾದ ಹಿನ್ನಲೆ ಬಿಎಂಆರ್‌ಸಿಎಲ್ ಮೆಟ್ರೋ ಸೇವೆಯನ್ನು ವಿಸ್ತರಿಸಿದ್ದು, ಇದರಿಂದ ಪ್ರಯಾಣಿಕರಿಗೆ ಇನ್ನಷ್ಟು ಸಹಾಯವಾಗಲಿದೆ.