Sunday, January 25, 2026
Homeಟಾಪ್ ನ್ಯೂಸ್NAMMA METRO: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್

NAMMA METRO: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ (Namma Metro) ಗುಲಾಬಿ ಮಾರ್ಗದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ನೀಡಿದೆ. ಬಹು ನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ (Pink Line Metro) ಶೀಘ್ರದಲ್ಲೇ ಟ್ರ್ಯಾಕ್‌ಗೆ ಇಳಿಯಲಿದ್ದು, ನಾಳೆಯಿಂದ ರೋಲಿಂಗ್ ಸ್ಟಾಕ್ ಟೆಸ್ಟ್ ಆರಂಭವಾಗಲಿದೆ.

ಈ ಕುರಿತು ಬಿಎಂಆರ್‌ಸಿಎಲ್ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ನಾಳೆಯಿಂದ (ಜನವರಿ 11) ಪಿಂಕ್ ಲೈನ್ ಮೆಟ್ರೋ ರೋಲಿಂಗ್ ಸ್ಟಾಕ್ ಪರೀಕ್ಷೆಗಳು ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಿಗ್ನಲಿಂಗ್ ವ್ಯವಸ್ಥೆ, ಬ್ರೇಕ್‌ಗಳ ಕಾರ್ಯಕ್ಷಮತೆ, ರೈಲಿನ ವೇಗ, ವಿದ್ಯುತ್ ಹಾಗೂ ದೂರಸಂಪರ್ಕ ವ್ಯವಸ್ಥೆಗಳ ಪರೀಕ್ಷೆ ನಡೆಸಲಾಗುತ್ತದೆ.

ಕಾಳೆನ ಅಗ್ರಹಾರದಿಂದ ತಾವರೆಕೆರೆಯವರೆಗೆ ಇರುವ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಲೋಮೀಟರ್ ಉದ್ದ) ಈ ರೋಲಿಂಗ್ ಸ್ಟಾಕ್ ಪರೀಕ್ಷೆಗಳು ನಡೆಯಲಿವೆ. ಜನವರಿ 11ರಿಂದ ಏಪ್ರಿಲ್ ಮಧ್ಯಭಾಗದವರೆಗೆ ಪರೀಕ್ಷೆಗಳು ಮುಂದುವರಿಯಲಿದ್ದು, ವಾಣಿಜ್ಯ ಸಂಚಾರ ಆರಂಭಕ್ಕೂ ಮುನ್ನ ಕೈಗೊಳ್ಳಲಾಗುವ ಅತ್ಯಂತ ಪ್ರಮುಖ ಹಂತವಾಗಿವೆ. ರೈಲುಗಳ ಕಾರ್ಯಕ್ಷಮತೆ ಹಾಗೂ ವಿವಿಧ ತಾಂತ್ರಿಕ ವ್ಯವಸ್ಥೆಗಳ ಪರಸ್ಪರ ಸಂಯೋಜನೆಯ ಸಮಗ್ರ ಪರಿಶೀಲನೆ ಈ ಪರೀಕ್ಷೆಗಳ ಮುಖ್ಯ ಉದ್ದೇಶವಾಗಿದೆ. ಅಗತ್ಯ ಅನುಮೋದನೆ ಪಡೆಯಲು ಈ ಹಂತ ಅವಶ್ಯಕವಾಗಿದೆ.

ಈ ಅವಧಿಯಲ್ಲಿ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆ, ಆಸಿಲೇಷನ್, ಸಿಗ್ನಲಿಂಗ್, ವಿದ್ಯುತ್ ಹಾಗೂ ದೂರಸಂಪರ್ಕ ವ್ಯವಸ್ಥೆಗಳೊಂದಿಗೆ ಏಕೀಕರಣ ಸೇರಿದಂತೆ ಹಲವು ತಾಂತ್ರಿಕ ಪರೀಕ್ಷೆಗಳು ನಡೆಯಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ತುಮಕೂರಲ್ಲಿ ಮೆಟ್ರೋ ಕಾಮಗಾರಿ ಆರಂಭ

ಬೆಂಗಳೂರು–ತುಮಕೂರು ಮೆಟ್ರೋ (namma metro) ಯೋಜನೆಗೆ ಅಧಿಕೃತ ಘೋಷಣೆ ದೊರೆತಿದ್ದು, ಇದೀಗ ಅಡಿಪಾಯ ಕಾಮಗಾರಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್‌ಜಿಲ್ಲಾ ಕಾರಿಡಾರ್‌ಗೆ ಸಂಬಂಧಿಸಿದಂತೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಗೊಂಡಿದೆ. ನಿರ್ಮಾಣ ಕಾರ್ಯ ಆರಂಭಿಸಲು ಎಲ್ಲ ರೀತಿಯ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಯೋಜನೆಯ ವೆಚ್ಚ ಮತ್ತು ವಿಸ್ತರಣೆ ಹೆಚ್ಚಾಗಿದ್ದು, ಇದು ಬೆಂಗಳೂರು ಹಾಗೂ ತುಮಕೂರು ಜಿಲ್ಲೆಯ ಜನರಿಗೆ ಹೆಚ್ಚಿನ ಪ್ರಯೋಜನ ತರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ಆರ್‌ವೀ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್‌ಗೆ ಡಿಪಿಆರ್ ತಯಾರಿಕಾ ಸಲಹಾ ಕಾರ್ಯವನ್ನು ನೀಡಿದೆ. ಸಂಸ್ಥೆಯು ಸುಮಾರು 1.2 ಕೋಟಿ ರೂ. ವೆಚ್ಚದಲ್ಲಿ 59.60 ಕಿಲೋಮೀಟರ್ ಉದ್ದದ ಮೆಟ್ರೋ ಮಾರ್ಗಕ್ಕೆ ಸಂಬಂಧಿಸಿದ ಡಿಪಿಆರ್ ಅನ್ನು ಈಗಾಗಲೇ ಸಿದ್ಧಪಡಿಸಿದೆ.

ಇದನ್ನೂ ಓದಿ: ತುಮಕೂರು ಮಂದಿಗೆ ಮಸ್ತ್​​​​ ಸುದ್ದಿ.. ಮೆಟ್ರೋ ಕಾಮಗಾರಿ ಆರಂಭ

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!