ಬೆಂಗಳೂರು : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ.
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ "ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ"ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.
ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು… pic.twitter.com/tpRVJC5dqk
— Siddaramaiah (@siddaramaiah) March 14, 2025
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆ ಮೂಲಕ ರಾಷ್ಟ್ರೀಯ ಇ-ಆಡಳಿತ ಪ್ರಸಸ್ತಿಗೆ ಭಾಜನಾಗಿರುವುದರ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯವಾಗಿದೆ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಇ-ಆಡಳಿತ ಉಪಕ್ರಮಗಳ ಅನುಷ್ಠಾನದಲ್ಲಿನ ಶ್ರೇಷ್ಠತೆ ಗುರುತಿಸಿ ಉತ್ತೇಜಿಸಲು ಕೇಂದ್ರದ ಆಡಳಿತ ಸುಧಾರಣೆಗಳು & ಸಾರ್ವಜನಿಕ ಕುಂದುಕೊರತೆಗಳ ಇಲಾಖೆಯು ಪ್ರತಿ ವರ್ಷವೂ ಇ-ಆಡಳಿತದ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುತ್ತದೆ. ಆ ಪೈಕಿ ಕರ್ನಾಟಕಕ್ಕೂ ಈ ಪ್ರಶಸ್ತಿ ಲಭಿಸಿದೆ.