ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರು ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಇಂದು ಜಯನಗರದಲ್ಲಿ ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿದರು. ನಕಲಿ ದೇಶಪ್ರಮಿ ಬಿಜೆಪಿಗರು ಭಾರತದ ರಾಷ್ಟ್ರಧ್ವಜ, ಸಂವಿಧಾನವನ್ನು ಎಂದಿಗೂ ಒಪ್ಪಿಲ್ಲ. ಮನುವಾದಿಗಳು ಸಮಾನತೆ, ಐಖ್ಯತೆ, ಸಮಗ್ರತೆ ಸಾರುವ ರಾಷ್ಟಧ್ವಜವನ್ನು ಒಪ್ಪಲು ಸಾಧ್ಯವೂ ಇಲ್ಲ ಎಂದು ಕಿಡಿಕಾರಿದರು.
ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನಿಸಿದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರು!
ನಕಲಿ ದೇಶಪ್ರಮಿ ಬಿಜೆಪಿಗರು ಭಾರತದ ರಾಷ್ಟ್ರಧ್ವಜ, ಸಂವಿಧಾನವನ್ನು ಎಂದಿಗೂ ಒಪ್ಪಿಲ್ಲ.
ಮನುವಾದಿಗಳು ಸಮಾನತೆ, ಐಖ್ಯತೆ, ಸಮಗ್ರತೆ ಸಾರುವ ರಾಷ್ಟಧ್ವಜವನ್ನು… pic.twitter.com/koPs1wVimG
— Karnataka Congress (@INCKarnataka) May 8, 2025
‘ಆಪರೇಷನ್ ಸಿಂಧೂರ’ಕ್ಕೆ ಕಾಂಗ್ರೆಸ್ ಬೆಂಬಲ
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ನಡೆಸಿದ್ದಾರೆ. ಬೆಂಗಳೂರಿನ ಕೆಆರ್ ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ ಸ್ಕ್ವೇರ್‌ವರೆಗೂ ತಿರಂಗಾ ಯಾತ್ರೆ ನಡೆಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ತಿರಂಗಾ ಯಾತ್ರೆಯಲ್ಲಿ ಸಚಿವರಾದ ಎಚ್.ಕೆ ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಎಚ್ ಮುನಿಯಪ್ಪ, ಬೋಸರಾಜು, ಕೆ. ಸುಧಾಕರ್, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು, ನೂರಾರು ಕಾರ್ಯಕರ್ತರುಗಳು ತ್ರಿವರ್ಣ ಧ್ವಜ ಹಿಡಿದು ಈ ತಿರಂಗಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.