Sunday, June 7, 2026
Homeಟಾಪ್ ನ್ಯೂಸ್ಬಂಡೀಪುರ ಮೋದಿ ಭೇಟಿ: ಹೆದ್ದಾರಿ ಸಂಚಾರ ನಿರ್ಬಂಧ

ಬಂಡೀಪುರ ಮೋದಿ ಭೇಟಿ: ಹೆದ್ದಾರಿ ಸಂಚಾರ ನಿರ್ಬಂಧ

ಬಂಡೀಪುರ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ ಹೇರಾಗಿದೆ.

ಏಪ್ರಿಲ್ 7ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12ರವರೆಗೆ ಬಂಡೀಪುರ ಮಾರ್ಗದಿಂದ ತಮಿಳುನಾಡಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರಲ್ಲಿ (ಊಟಿ ರಸ್ತೆ) ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸರ್ಕಾರಿ ಬಸ್‌, ವಾಹನ ಹೊರತುಪಡಿಸಿ ಭಾರೀ ವಾಹನ ಸಂಚಾರ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಗುರುವಾರ ಆದೇಶ ಹೊರಿಡಿಸಿದ್ದಾರೆ.

ಹೆಚ್ಚಿನ ಭದ್ರತೆ, ರಸ್ತೆ ನಿರ್ವಹಣೆ ಹಾಗೂ ಇತರ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿ.ಎಸ್. ರಮೇಶ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೇ ಭೇಟಿ ನೀಡಲಿದ್ದು, ಅಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಭಾನುವಾರದ ವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ, ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ.

ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಮೈಸೂರಿನಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ 3 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಮತ್ತು ನಾಣ್ಯ ಸ್ಮರಣಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!