Monday, May 18, 2026
Homeಬೆಂಗಳೂರುಶಾಸಕ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

ಶಾಸಕ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿದೆ. ಹೀಗಿರುವಾಗಲೇ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯರಿಗೆ ಹೊಸದೊಂದು ಕಾನೂನು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಜಾರಿ ಇರುವಾಗಲೇ ಸಭೆ ನಡೆಸಿದ್ದಕ್ಕೆ ಚುನಾವಣಾಧಿಕಾರಿ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಶಾಸಕ ರೇಣುಕಾಚಾರ್ಯ ಏಪ್ರಿಲ್​ 2ರಂದು ಬೆಂಗಳೂರಿನ ಗುರುರಾಜ್​ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಕಾರ್ಯಕರ್ತರ ಜತೆಯಲ್ಲಿ ಸಭೆ ನಡೆಸಿದ್ದರು. ಮೈಕ್​ ಹಿಡಿದು ಶಾಸಕ ರೇಣುಕಾಚಾರ್ಯ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಸಂಪೂರ್ಣ ಸಭೆಯ ವಿಡಿಯೋ ಮಾಡಿಕೊಂಡು, ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು. ಈ ಪ್ರಕರಣ ಸಂಬಂಧ ಬೆಂಗಳೂರಿನ ಹೈಗ್ರೌಂಡ್​ ಪೊಲೀಸ್​ ಠಾಣೆಯಲ್ಲಿ ಚುನಾವಣಾಧಿಕಾರಿಗಳು ಎಫ್​ಐಆರ್​ ದಾಖಲಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಶಾಸಕ ರೇಣುಕಾಚಾರ್ಯ, ಲೋಕಾಯುಕ್ತ ಪೊಲೀಸರು ದಾಖಲಿಸಿರುವ ದೂರು ಹಾಗೂ ದಾವಣಗೆರೆಯ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಇವೆರಡನ್ನೂ ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ರೇಣುಕಾಚಾರ್ಯಗೆ ಹಿನ್ನಡೆಯಾಗಿದ್ದು, ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದರ ಬೆನ್ನಲ್ಲೇ ಇದೀಗ ಶಾಸಕ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ ಎದುರಾದಂತಾಗಿದೆ.

ಹೆಚ್ಚಿನ ಸುದ್ದಿ

Change Language »
error: Content is protected !!