Sunday, July 7, 2024
Homeಟಾಪ್ ನ್ಯೂಸ್DK SHIVAKUMAR : ನಮ್ಮ ಕಾಲದಲ್ಲಿ ಹಗರಣಗಳಾಗಿಲ್ಲ : ಡಿಕೆಶಿ

DK SHIVAKUMAR : ನಮ್ಮ ಕಾಲದಲ್ಲಿ ಹಗರಣಗಳಾಗಿಲ್ಲ : ಡಿಕೆಶಿ

ಚನ್ನಪಟ್ಟಣ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ, ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಮುಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅಕ್ರಮ ನಡೆದಿದೆಯೇ ಇಲ್ಲವೇ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತಿನಲ್ಲಿ ಇಡಲಾಗಿದೆ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದೂ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ, ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಕೂಡ ಸಿಎಂ ಪ್ರಶ್ನಿಸಿದ್ದಾರೆ.

ಈ ಸಂಬಂಧ ಹಿಂದೆಯೇ ಸರ್ಕಾರಕ್ಕೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ 15 ಪತ್ರ ಬರೆದಿದ್ದರು. ತುರ್ತು ಕ್ರಮಕ್ಕೆ ಸಮಿತಿ ರಚಿಸಲು ಶಿಫಾರಸ್ಸು ಮಾಡಿದ್ದರು. ನಗರಾಭಿವೃದ್ಧಿ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಫೆ 8ರಿಂದ ಮುಡಾ ಆಯುಕ್ತರಾಗಿ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆದಿದ್ದರು. ಆದರೆ ಮೈಸೂರು ಡಿಸಿ ಪತ್ರಗಳಿಗೆ ಆಯುಕ್ತರು ಯಾವುದೇ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೂ ಪತ್ರ ಬರೆದಿದ್ದರು.

 

 

ಹೆಚ್ಚಿನ ಸುದ್ದಿ