Sunday, July 7, 2024
Homeಟಾಪ್ ನ್ಯೂಸ್MUDA SCAM: ಮುಡಾ ಹಗರಣ ಸಿಬಿಐಗೆ ವಹಿಸಿ : ಆರ್‌.ಅಶೋಕ

MUDA SCAM: ಮುಡಾ ಹಗರಣ ಸಿಬಿಐಗೆ ವಹಿಸಿ : ಆರ್‌.ಅಶೋಕ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಪ್ರತಿ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕ ನಂತರ ಆದೇಶವಾಗಬೇಕು. ಆದರೆ ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ರು

ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ.ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದ್ದಾರೆ.

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರಿಂದ ಪಡೆದಿರುವುದು 55 ಕೋಟಿ ರೂಪಾಯಿ ಮೌಲ್ಯದ 3 ಎಕರೆ 16 ಗುಂಟೆ ಜಮೀನು. ಆದರೆ ಅವರಿಗೆ ನೀಡಿರುವುದು 15 ರಿಂದ 16 ಕೋಟಿ ರೂ. ಮೌಲ್ಯದ ಜಮೀನು. ಪ್ರತಿಪಕ್ಷಗಳು ಆರೋಪ ಮಾಡುವಾಗ ಇವನ್ನೆಲ್ಲ ಅರಿತುಕೊಂಡಿರಬೇಕು ಎಂದು ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸುದ್ದಿ