Sunday, April 19, 2026
Homeಟಾಪ್ ನ್ಯೂಸ್BASAVARAJ BOMMAI: ಕಾಂಗ್ರೆಸ್‌ನವರ ಕಳ್ಳತನ ನಿಂತು ಹೋಗುವ ಭಯಕ್ಕೆ ಜಿ ರಾಮ್ ಜಿ ಯೋಜನೆಗೆ ವಿರೋಧ:...

BASAVARAJ BOMMAI: ಕಾಂಗ್ರೆಸ್‌ನವರ ಕಳ್ಳತನ ನಿಂತು ಹೋಗುವ ಭಯಕ್ಕೆ ಜಿ ರಾಮ್ ಜಿ ಯೋಜನೆಗೆ ವಿರೋಧ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಬಿ ಜಿ ರಾಮ್ ಜಿ (Vib G Ram G) ಯೋಜನೆಯಲ್ಲಿ ಕಾರ್ಮಿಕರಿಗೆ ಕೂಲಿ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗಳಿಗೆ ಇದೆ. ಆದರೆ ಕಾಂಗ್ರೆಸ್‌ನವರಿಗೆ (Congress) ತಮ್ಮ ಕಳ್ಳತನ ನಿಂತು ಹೊಗುವ ಭಯದಿಂದ ಅವರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 100 ರಿಂದ 125 ದಿನಕ್ಕೆ ಕೂಲಿ ದಿನ ಹೆಚ್ಚಳ ಮಾಡಿದ್ದಾರೆ. ಇದರಿಂದ ಕೂಲಿಕಾರಿಗೆ ಅನುಕೂಲ ಆಗಲಿದೆ. ಈ ಯೋಜನೆಯಲ್ಲಿ ಪ್ರತಿ ಮನೆಯಲ್ಲಿ ಕೆಲಸ ಇರುವವರು, ಇಲ್ಲದವರ ಪಟ್ಟಿ ಮಾಡುವುದು, ಅಭಿವೃದ್ಧಿ ಯೋಜನೆ ರೂಪಿಸುವುದು, ಅನುಷ್ಠಾನಗೊಳಿಸುವುದು, ಕಾರ್ಮಿಕರಿಗೆ ಕೂಲಿ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗಳಿಗೆ ಇರುತ್ತದೆ ಎಂದರು.

ಕಾಂಗ್ರೆಸ್ ನವರು ಜಿ ರಾಮ್ ಜಿ ಯೋಜನೆಯಲ್ಲಿ ಗ್ರಾಮ ಪಂಚಾಯತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದು ಹೇಳುತ್ತಾರೆ. ವಿಬಿ ಜಿ ರಾಮ್ ಜಿ ವಿಧೇಯಕದ ಕ್ಲಾಸ್ 16 ರಲ್ಲಿ ಗ್ರಾಮ ಪಂಚಾಯತಿಗೆ ಎಲ್ಲಾ ಮನೆಯಲ್ಲಿ ಕೆಲಸ ಇದೆಯಾ ಇಲ್ಲವೇ ಎಂದು ನೋಡುವ ಹಕ್ಕಿದೆ‌. ಗ್ರಾಮದ ಅಭಿವೃದ್ದಿ ಯೋಜನೆ ರೂಪಿಸುವ ಹಕ್ಕು, ಯೋಜನೆ ಅನುಷ್ಠಾನ ಮಾಡುವ ಅಧಿಕಾರ, ಎಲ್ಲಾ ದಾಖಲೆ ಮಾಡುವ ಅಧಿಕಾರ, ಕೂಲಿ ಕೊಡುವ ಅಧಿಕಾರ ಅವರಿಗೆ ಇರುತ್ತದೆ. ಆದರೂ ಕಾಂಗ್ರೆಸ್ ನವರು ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ವಿಕಸಿತ ಭಾರತ ಎಂದರೆ ಗ್ರಾಮ ರಾಜ್ಯ ರಾಮರಾಜ್ಯ ಆಗಲಿ ಅಂತ ಯೋಜನೆ ಮಾಡಿದ್ದಾರೆ‌. ಈ ಯೋಜನೆಯಲ್ಲಿ ಸ್ಕೂಲ್ ರೂಮ್ ಕಟ್ಟಲು ಅವಕಾಶ ಇದೆ. ಕರ್ನಾಟಕದಲ್ಲಿ ಸುಮಾರು 30 ಸಾವಿರ ಸ್ಕೂಲ್ ರೂಮ್ ಕಟ್ಟಲು ಅವಕಾಶ ಇದೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹ್ವಾನ್ ಅವರು, ಇವತ್ತಿನ ಅಗತ್ಯಕ್ಕೆ ತಕ್ಕಂತೆ ಯೋಜನೆ ಮಾಡಿದ್ದಾರೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆಧಾರ ಸೀಡಿಂಗ್, ಡಿಜಿಟಲೈಜೇಷನ್ ಮಾಡಿದ್ದಾರೆ.
ಹಿಂದೆ ಕೂಲಿಗಾಗಿ ಕಾಳು ಯೋಜನೆಯಲ್ಲಿ ಹಿಂದಿನ ಸಿಎಂ ವೀರೇಂದ್ರ ಪಾಟೀಲ್ ಅವರ ಹೆಸರಿನಲ್ಲಿ ಕೂಲಿ ಪಡೆದಿದ್ದರು. ಕಾಲಿನ ಹೆಬ್ಬೆಟ್ಟಿನಿಂದ ಸಹಿ ಮಾಡಿದ್ದರು. ಈ ಯೋಜನೆ ಅನಿಷ್ಠಾನದಲ್ಲಿ ಗುಲಬರ್ಗಾ ಮೊದಲ ಸ್ಥಾನದಲ್ಲಿತ್ತು ಅದನ್ನು ತನಿಖೆ ಮಾಡಿದಾಗ ಅವ್ಯವಹಾರ ಪತ್ತೆಯಾಗಿ ಸಿಬಿಐ ತನಿಖೆ ನಡೆಸಲಾಗಿತ್ತು. ಬೆಳಗಾವಿಯಲ್ಲಿಯೂ ಸಿಬಿಐ ತನಿಖೆ ನಡೆದಿತ್ತು ಎಂದು ಹೇಳಿದರು.

ವಿಬಿ ಜಿ ರಾಮ್ ಜಿ ಯೋಜನೆ ಗ್ರಾಮಿಣ ಜನರಿಗೆ ಹೆಚ್ಚಿನ ಸದಪಯೋಗ ನೀಡಲು ಸಕಾರಾತ್ಮವಾಗಿ ಮಾಡಲಾಗಿದೆ. ಇದನ್ನು ಕಾಂಗ್ರೆಸ್ ಕೊರ್ಟ್ ನಲ್ಲಿ ಚಾಲೆಂಜ್ ಮಾಡಲಿ, ಅವರ ನಿಜ ಬಣ್ಣ ಬಯಲಾಗುತ್ತದೆ. ಅಧಿವೇಶನದಲ್ಲಿ ಯೋಜನೆಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಈ ಯೋಜ‌ನೆಯಲ್ಲಿ ಗಾಂಧಿಜಿ ಹೆಸರು ಕೈ ಬಿಟ್ಟಿರುವುದಕ್ಕೆ ಕಾಂಗ್ರೆಸ್ ಆಕ್ಷೇಪಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 80% ರಷ್ಟು ಯೋಜನೆಗಳು ಜವಾಹರಲಾಲ್ ನೆಹರು, ಇಂದಿರಾ, ರಾಜೀವ್ ಗಾಂಧಿ ಹೆಸರಿನಲ್ಲಿವೆ. ಇದು ಮೊದಲು ಜವಾಹರ ರೋಜಗಾರ ಯೋಜನೆ ಅಂತ ಇತ್ತು. ಚುನಾವಣೆ ಬಂದಾಗ ಗಾಂಧಿ ಹೆಸರನ್ನು ದುರುಪಯೊಗ ಪಡಿಸಿಕೊಂಡಿದ್ದಾರೆ. ಗಾಂಧಿಯನ್ನು ರಾಮನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಗಾಂಧಿ ಯಾವಾಗಲು ರಾಮನ ಹೆಸರು ಹೇಳುತ್ತಿದ್ದರು. ಈಗ ಈ ಯೋಜನೆಗೆ ರಾಮನ ಹೆಸರಿಟ್ಟಿರುವುದಕ್ಕೆ ಗಾಂಧಿ ಆತ್ಮ ಖುಷಿಯಾಗಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಬಳ್ಳಾರಿ ಗಲಭೆ ಪ್ರಕರಣ – ಪೊಲೀಸರು ನಮ್ಮ ಕಂಪ್ಲೇಂಟೇ ತಗೋತಿಲ್ಲ ಎಂದ ಗಾಲಿ ಜನಾರ್ಧನ ರೆಡ್ಡಿ!

ಹೆಚ್ಚಿನ ಸುದ್ದಿ

Change Language »
error: Content is protected !!