Sunday, July 7, 2024
Homeಚುನಾವಣೆ 2023PM NARENDRA MODI: ದೇಶದ ಜನ ಉತ್ತಮ ಆಡಳಿತ, ಅಭಿವೃದ್ಧಿ ಪರವಾಗಿದ್ದಾರೆ: ಪ್ರಧಾನಿ ಮೋದಿ

PM NARENDRA MODI: ದೇಶದ ಜನ ಉತ್ತಮ ಆಡಳಿತ, ಅಭಿವೃದ್ಧಿ ಪರವಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ (BJP) ಜಯಭೇರಿ ಬಾರಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), ದೇಶದ ಜನರು ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪರವಾಗಿ ಇದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ (X) ಬರೆದುಕೊಂಡಿರುವ ಪ್ರಧಾನಿ ಮೋದಿ, ಜನಾರ್ದನನಿಗೆ ನಮಿಸುತ್ತೇವೆ. ಛತ್ತೀಸ್ ಗಢ (Chattisgarh), ಮಧ್ಯಪ್ರದೇಶ (Madhya pradesh) ಮತ್ತು ರಾಜಸ್ಥಾನದ (Rajasthan) ಫಲಿತಾಂಶಗಳು, ಭಾರತದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯದೊಂದಿಗೆ ದೃಢವಾಗಿ ಇದ್ದಾರೆ ಎಂಬುದನ್ನು ಸೂಚಿಸುತ್ತದೆ.

ಈ ರಾಜ್ಯಗಳ ಜನರಿಗೆ ಅವರ ಅಚಲ ಬೆಂಬಲಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಮತ್ತು ಅವರ ಯೋಗಕ್ಷೇಮಕ್ಕಾಗಿ ನಾವು ದಣಿವರಿಯಿಲ್ಲದೆ ಶ್ರಮಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ.

ಶ್ರಮಿಸುತ್ತಿರುವ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳು. ಅವರು ದಣಿವರಿಯದೆ ಕೆಲಸ ಮಾಡಿದ್ದಾರೆ ಮತ್ತು ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರಲ್ಲಿ ಎತ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿ