ವಾಷಿಂಗ್ಟನ್: ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ತುರ್ತಾಗಿ ಲ್ಯಾಂಡಿಂಗ್ ಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. 178 ಜನರೊಂದಿಗೆ ಕೊಲೊರಾಡೋ ಸ್ಟಿಂಗ್ಸ್‌ನಿಂದ ಡಲ್ಲಾಸ್‌ಗೆ ಹೊರಟಿದ್ದ ವಿಮಾನದಲ್ಲಿ ಈ ಅವಘಡ ಸಂಭವಿಸಿದೆ.
ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪೈಲಟ್‌ಗಳು ತಕ್ಷಣವೇ ಡೆನ್ವರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿ ವಿಮಾನ ನಿಲ್ದಾಣದಲ್ಲಿ ದಟ್ಟ ಹೊಗೆ ಆವರಿಸಿತು.
American Airlines flight 4012 just caught fire at Denver airport pic.twitter.com/EHIGMAqJjJ
— Stone (@flynnstone) March 14, 2025
ಆದರೆ, ಧೈರ್ಯಗೆಡದ ವಿಮಾನ ಸಿಬ್ಬಂದಿ 178 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಈ ಅವಘಡದಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿವೆ. ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿರುವಾಗ ಹೊಗೆ ಆವರಿಸಿದ್ದು, ವಿಮಾನದ ರೆಕ್ಕೆಯ ಮೇಲೆ ಪ್ರಯಾಣಿಕರು ನಿಂತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.