ಉಡುಪಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6 ಅಥವಾ 7ರಂದು ಉಡುಪಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮೇ ನಲ್ಲಿ ಜಿಲ್ಲಾ ಕೇಂದ್ರದಲ್ಲಿ ಎರಡು ಕಾರ್ಯಕ್ರಮಗಳು ನಡೆಯಲಿದ್ದು, ಒಬ್ಬರು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಮತ್ತೂಬ್ಬರು ಉಡುಪಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ರಾಜ್ಯದ ಒಟ್ಟು 80 ಕಡೆ ಬೃಹತ್ ರ್ಯಾಲಿಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.