Saturday, January 25, 2025
Homeಟಾಪ್ ನ್ಯೂಸ್ಮತ್ತೆ ಹೆಚ್ಚಾಯ್ತು ಕೋವಿಡ್‌ ಭೀತಿ: ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ಮತ್ತೆ ಹೆಚ್ಚಾಯ್ತು ಕೋವಿಡ್‌ ಭೀತಿ: ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ದೇಶದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು  ಮಹತ್ವದ ಸಭೆ ನಡೆಸಿದ್ದಾರೆ.

ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ದೇಶದಲ್ಲಿನ ಕರೊನಾ ಪರಿಸ್ಥಿತಿಯ ಬಗ್ಗೆ ಅವಲೋಕಿಸಲಾಯಿತು. ಕರೋನಾ ಪ್ರಕರಣಗಳ ತೀವ್ರತೆ ಹಾಗೂ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಬಗ್ಗೆ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಡೇಟಾ ಪ್ರಕಾರ,  ಭಾರತದಲ್ಲಿ 1134 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 7,026 ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿವೆ. ಈ ಅವಧಿಯಲ್ಲಿ ಐವರು ಸಾವನ್ನಪ್ಪಿದ್ದು, ಛತ್ತೀಸ್‌ಗಢ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ವರದಿಯಾಗಿದೆ.  

ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಕರೋನಾ ಪ್ರಕರಣಗಳ ಬಗ್ಗೆ ವಿಶೇಷ ಜಾಗೃತೆ ವಹಿಸಲು ಕೇಂದ್ರ ಸಚಿವಾಲಯ ಸೂಚಿಸಿದ್ದು, ಕೋವಿಡ್‌ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತೆ ಪಾಲಿಸಲು ಸರ್ಕಾರಗಳಿಗೆ ಪತ್ರ ಬರೆದಿದೆ.

ಹೆಚ್ಚಿನ ಸುದ್ದಿ

error: Content is protected !!