ನೂತನ ಸಂಸತ್ ಭವನ ನಿರ್ಮಾಣ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸ ಸಂಸತ್ತಿನ ಸಂಕೀರ್ಣದಲ್ಲಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಳೆದಿದ್ದು, ಸಂಕೀರ್ಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ್ದಾರೆ.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೂಡಾ ಪ್ರಧಾನಿ ಜೊತೆಗೆ ಸಂಸತ್ ಭವನದ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಕಟ್ಟಡ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಸಂಸತ್ ಭವನ ನಿರ್ಮಾಣದ ಪರಿಶೀಲನೆಗೆ ಪ್ರಧಾನಿ ಮೋದಿ ಹಠಾತ್ ಭೇಟಿ ನೀಡಿ ಈ ಹಿಂದೆ ಕೂಡಾ ಹಠಾತ್ ಭೇಟಿ ನೀಡಿದ್ದರು.
ಸೆಪ್ಟೆಂಬರ್ 2021 ರಲ್ಲಿ, ಪ್ರಧಾನ ಮಂತ್ರಿ ಅವರು ಹೊಸ ಸಂಕೀರ್ಣದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದರು.