Saturday, January 25, 2025
Homeಟಾಪ್ ನ್ಯೂಸ್ಮೋದಿ ನಿಂತರೂ ಅವರೆದುರು ಗೆಲ್ಲುವೆ: ಎಸ್​ಎಸ್ ಮಲ್ಲಿಕಾರ್ಜುನ

ಮೋದಿ ನಿಂತರೂ ಅವರೆದುರು ಗೆಲ್ಲುವೆ: ಎಸ್​ಎಸ್ ಮಲ್ಲಿಕಾರ್ಜುನ

ದಾವಣಗೆರೆ: ನನ್ನ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ನಿಂತರೂ ನಾನು ಗೆಲ್ಲುವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಎಸ್​ಎಸ್ ಮಲ್ಲಿಕಾರ್ಜುನ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಚುನಾವಣೆಯಲ್ಲಿ ಸ್ವಲ್ಪ ಜಾಸ್ತಿ ಹುಮ್ಮಸಿನಲ್ಲಿದ್ದ ಹಿನ್ನೆಲೆ ಸೋಲಾಗಿದೆ. ಈ ಬಾರಿ ಆ ರೀತಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ನಾವು ತಂದ ಕಾಮಗಾರಿಗಳೇ ಈಗ ನಡೆಯುತ್ತಿವೆ. ರಾಜ್ಯದಲ್ಲಿ ಹೇಗೆ 40 ಪರ್ಸೆಂಟ್ ಸರ್ಕಾರ ಇದೆ. ದಾವಣಗೆರೆಯಲ್ಲಿ ಸಹ ಇದೆ. ಇದರಿಂದ ಜನ ಬೇಸತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಹಿಟ್ಲರ್ ರೀತಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಇಂದಿನಿಂದ ಪ್ರಚಾರ ಕಾರ್ಯ

ಏ.03 ರಿಂದ ಪ್ರಚಾರ ಕಾರ್ಯ ಆರಂಭಿಸಿದ್ದು, ದಾವಣಗೆರೆ ನಗರದ ಅನೆಕೊಂಡದ ಐತಿಹಾಸಿಕ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ 1994, 2004, 2008, 2013 ಹಾಗೂ 2018 ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಇವರು ಜಿಲ್ಲೆಯ ದಕ್ಷಿಣ ಭಾಗದಿಂದ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಪ್ರತಿನಿಧಿಸುತ್ತಿದ್ದಾರೆ.

ಈ ಬಾರಿಯೂ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್​ ಸಾಧಿಸಿರುವ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಕಂರಪ್ಪ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್​ ಈ ಬಾರಿಯೂ ಟಿಕೆಟ್​ ನೀಡಿದೆ.

ಹೆಚ್ಚಿನ ಸುದ್ದಿ

error: Content is protected !!