Sunday, July 7, 2024
Homeಟಾಪ್ ನ್ಯೂಸ್PM MODI : ನೀಟ್ ಪರೀಕ್ಷೆ ಹಗರಣ..ಯಾರನ್ನೂ ಬಿಡಲ್ಲ ಎಂದ ಪ್ರಧಾನಿ ಮೋದಿ

PM MODI : ನೀಟ್ ಪರೀಕ್ಷೆ ಹಗರಣ..ಯಾರನ್ನೂ ಬಿಡಲ್ಲ ಎಂದ ಪ್ರಧಾನಿ ಮೋದಿ

ನವದೆಹಲಿ : ದೇಶಾದ್ಯಂತ ಸದ್ದು ಮಾಡಿದ್ದ ನೀಟ್ ಪರೀಕ್ಷೆಯ ಅಕ್ರಮದ ಕುರಿತಾಗಿ ಉತ್ತರಿಸುವಂತೆ ವಿಪಕ್ಷ ನಾಯಕರು ಲೋಕಸಭೆಯಲ್ಲಿ ಒತ್ತಾಯಿಸಿದ್ದರು.

ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಸುಮ್ಮನೇ ಬಿಡಲ್ಲ ಎಂದು ಹೇಳಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ನಮ್ಮ ಸರ್ಕಾರವಿ ಗಂಭೀರವಾಗಿ ಪರಿಗಣಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸಮಸ್ಯೆಯನ್ನ ಪರಿಹರಿಸಲು ಕಾನೂನು ರೂಪಿಸಲಾಗಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಈಗಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದೇಶಾದ್ಯಂತ ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ ಎಂದು ತಿಳಿಸಿದರು.

ಹೆಚ್ಚಿನ ಸುದ್ದಿ