Saturday, November 2, 2024
Homeದೇಶಸರ್ ಎಂವಿ ಸಮಾಧಿಗೆ ತಲೆಬಾಗಿದ ಪ್ರಧಾನಿ

ಸರ್ ಎಂವಿ ಸಮಾಧಿಗೆ ತಲೆಬಾಗಿದ ಪ್ರಧಾನಿ

ರಾಜ್ಯದ ಹೆಮ್ಮೆಯ ಸರ್. ಎಂ.ವಿಶ್ವೇಶ್ವರಯ್ಯ ಅವರ ಸಮಾಧಿ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಇಂದು ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ಚಿಕ್ಕಬಳ್ಳಾಪುರ ಹೆಲಿಪ್ಯಾಡ್‍ಗೆ ಬೆಂಗಳೂರಿನಿಂದ ಆಗಮಿಸಿದರು.
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಕೂಡಲೇ ಭಾರತರತ್ನ ಸರ್. ಎಂ.ವಿಶ್ವೇಶ್ವರಯ್ಯ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಬಳಿಕ ಸರ್ ವಿಶ್ವೇಶ್ವರಯ್ಯ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡಿದ್ದಾರೆ.
ಇಲ್ಲಿಂದ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನೆಗೆ ತೆರಳಲಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!