Saturday, November 2, 2024
Homeಟಾಪ್ ನ್ಯೂಸ್ಇಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ: ಹಲವು ಕಾರ್ಯಕ್ರಮದಲ್ಲಿ ಭಾಗಿ

ಇಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ: ಹಲವು ಕಾರ್ಯಕ್ರಮದಲ್ಲಿ ಭಾಗಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದು, ಚೆನ್ನೈ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಏಪ್ರಿಲ್ 8 ಮ್ತ್ತು 9 ರಂದು ಕರ್ನಾಟಕ ಹಾಗೂ ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಈ ಹಿನ್ನೆಲೆ , ಇಂದು ತಮಿಳುನಾಡಿಗೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 3ಕ್ಕೆ 1,260 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಚೆನ್ನೈ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು (ಹಂತ-1) ಉದ್ಘಾಟಿಸಲಿದ್ದಾರೆ.

ಸಂಜೆ 4 ಗಂಟೆಗೆ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ, ತಾಂಬರಂ ಮತ್ತು ಸೆಂಗೋಟ್ಟೈ ನಡುವಿನ ಎಕ್ಸ್‌ಪ್ರೆಸ್ ಸೇವೆಗೂ ಚಾಲನೆ ನೀಡಲಿದ್ದಾರೆ. 294 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ತಿರುತುರೈಪೂಂಡಿ ಮತ್ತು ಅಗಸ್ತಿಯಂಪಲ್ಲಿ ನಡುವಿನ 37 ಕಿಮೀ ಗೇಜ್ ಪರಿವರ್ತನೆ ವಿಭಾಗವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಚೆನ್ನೈನ ಶ್ರೀ ರಾಮಕೃಷ್ಣ ಮಠದ 125ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಚೆನ್ನೈನ ಆಲ್‌ಸ್ಟ್ರೋಮ್ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿಸುಮಾರು 3,700 ಕೋಟಿ ರೂ. ವೆಚ್ಚದ ರಸ್ತೆ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಭದ್ರತೆಗಾಗಿ 22,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಡ್ರೋನ್‌ಗಳ ಹಾರಾಟ ನಿಷೇಧಿಸಲಾಗಿದೆ.

ಹೆಚ್ಚಿನ ಸುದ್ದಿ

error: Content is protected !!