ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪ್ರಶಾಂತ್ ಮಾಡಾಳ್, ಸುರೇಂದ್ರನ್, ಸಿದ್ದೇಶ್, ನಿಕೊಲಸ್ ಮತ್ತು ಗಂಗಾಧರ್ ಬಂಧಿತ ಆರೋಪಿಗಳು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಸಲಾಯಿತು. ಏಳು ದಿನ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಮೂರು ದಿನಗಳ ಕಾಲ ವಿಚಾರಣಾ ಬಂಧನಕ್ಕೆ ಸಮ್ಮತಿಸಿದೆ. ಹೀಗಾಗಿ ಮಾ. ೧೬ ರವರೆಗೆ ಐವರಿಗೂ ಕೃಷ್ಣ ಜನ್ಮ ಸ್ಥಾನ ಖಾಯಂ ಆಗಲಿದೆ.
ಈ ಮಧ್ಯ ಲೋಕಾಯುಕ್ತ ಪೊಲೀಸರು ಮಧ್ಯಂತರ ಜಾಮೀನನ್ನು ರದ್ದು ಪಡಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿರುವ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಅರ್ಜಿ ಮಂಗಳವಾರ ವಿಚಾರಣೆಗೆ ಒಳಗಾಗುವ ಸಾಧ್ಯತೆ ಇದೆ.
ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಮಾಡಾಳ್ ವಿರೂಪಾಕ್ಷಪ್ಪನವರಿಗೆ ನೋಟಿಸ್ ಜಾರಿಗೊಳಿಸಲಾಗಿತ್ತು. ಹೀಗಾಗಿ ಸೋಮವಾರ ಎಂ ಎಸ್ ಬಿಲ್ಡಿಂಗ್ ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಮಾಡಾಳ್ ರನ್ನು ತನಿಖಾಧಿಕಾರಿಗಳು ಪ್ರಶ್ನಿಸಿದ್ದಾರೆ.
ಮನೆಯಲ್ಲಿ ಕೋಟಿ ಕೋಟಿ ಹಣ ದೊರೆತ ಪ್ರಕರಣದಲ್ಲಿ ಮಾಡಾಳ್ ಪ್ರಮುಖ ಆರೋಪಿಯಾಗಿದ್ದಾರೆ