ಬೆಂಗಳೂರು : ಕಳೆದ ಚುನಾವಣೆಯ ಸಮಯದಲ್ಲಿ ಇಡೀ ದೇಶವನ್ನೇ ನಡುಗಿಸಿದ ಹಾಸನ ಪೆನ್ ಡ್ರೈವ್ ಪ್ರಕರಣ ವಿಚಾರಣೆ ಶನಿವಾರ ಆರಂಭವಾಗಿದೆ. ಪ್ರಕರಣ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದು, ಇಂದು ಆರೋಪಿಯ ವಿರುದ್ದ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ಪ್ರಜ್ವಲ್ ರೇವಣ್ಣನನ್ನು ಕರೆತಂದಿರುವ ಪೊಲೀಸರು ಕೆಲವೇ ಹೊತ್ತಿನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯ ವೇಳೆ ಹಾಸನದಲ್ಲಿ ಸೋರಿಕೆಯಾಗಿದ್ದ ಆಗಿನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ದೃಶ್ಯಗಳು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಕೂಡಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ವಿರುದ್ದ ರೆಡ್ ಕಾರ್ನರ್ ನೋಟಿಸ್ ಸಹ ಹೊರಡಿಸಲಾಗಿತ್ತು. ಬಳಿಕ ಭಾರತಕ್ಕೆ ಬರುತ್ತಿದ್ದಂತೆಯೇ ಬಂಧಿಸಲಾಗಿತ್ತು.